Home ದೇಶ ರಾಜ್ಯದಲ್ಲಿ ಯಾವುದೇ ಪಾಕಿಸ್ತಾನಿ ಪ್ರಜೆಗಳು ಇಲ್ಲ, ಗಡಿಪಾರು ಮಾಡಲಾಗಿದೆ; ಬಿಜೆಪಿ ಆರೋಪಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಯಾವುದೇ ಪಾಕಿಸ್ತಾನಿ ಪ್ರಜೆಗಳು ಇಲ್ಲ, ಗಡಿಪಾರು ಮಾಡಲಾಗಿದೆ; ಬಿಜೆಪಿ ಆರೋಪಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ

0

ಪಾಕಿಸ್ತಾನದ ಪ್ರಜೆಗಳನ್ನು ರಾಜ್ಯದಲ್ಲೇ ಉಳಿಸಿಕೊಳ್ಳಲಾಗಿದೆ. ಅವರನ್ನು ಗಡಿಪಾರು ಮಾಡಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನೂ ಗಡಿಪಾರು ಮಾಡಲಾಗಿದೆ, ಯಾರನ್ನೂ ರಾಜ್ಯದಲ್ಲಿ ಬಿಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮೈಸೂರಿನಲ್ಲಿರುವ ಕೆಲವೇ ಕೆಲವು ಪಾಕಿಸ್ತಾನಿ ಪ್ರಜೆಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ರಾಜ್ಯದಲ್ಲಿ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ. ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

You cannot copy content of this page

Exit mobile version