Home ಬ್ರೇಕಿಂಗ್ ಸುದ್ದಿ ಡೆತ್ ನೋಟ್ ನಲ್ಲಿ ಹೆಸರೇ ಇಲ್ಲ; ನಾನ್ಯಾಕೆ ಟಾರ್ಗೆಟ್ ಆಗ್ತಿದ್ದೀನಿ? : ಪ್ರಿಯಾಂಕ್ ಖರ್ಗೆ

ಡೆತ್ ನೋಟ್ ನಲ್ಲಿ ಹೆಸರೇ ಇಲ್ಲ; ನಾನ್ಯಾಕೆ ಟಾರ್ಗೆಟ್ ಆಗ್ತಿದ್ದೀನಿ? : ಪ್ರಿಯಾಂಕ್ ಖರ್ಗೆ

0

ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಹಾಗಿದ್ದರೂ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಿರಂತರವಾಗಿ ನನ್ನ ಮತ್ತು ಕುಟುಂಬದ ತೇಜೋವಧೆ ಮಾಡುವುದನ್ನ ಸಹಿಸುವುದಿಲ್ಲ ಎಂದು ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022, ಏಪ್ರಿಲ್ 12 ರಂದು ಉಡುಪಿಯ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುತ್ತಿಗೆದಾರರ ಸಂತೋಷ್ ಪಾಟೀಲ್ ಡೆತ್ ನೋಟ್ ನಲ್ಲಿ ನೇರವಾಗಿ ಅಂದಿನ ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೆಸರು ಉಲ್ಲೇಖಿಸಿದ್ದರು. ಅಲ್ಲದೆ, ಹೆಂಡತಿ ಮಕ್ಕಳಿಗೆ ಪರಿಹಾರ ಕೊಡಬೇಕು ಎಂದು ಹೇಳಿದ್ದರು. ಆದರೆ ಸಚಿನ್ ಪಾಂಚಲ್ ಡೆತ್ ನೋಟ್ ನಲ್ಲಿ ನನ್ನ ಹೆಸರು ಏಲ್ಲಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಸಂತೋಷ್ ಪಾಟೀಲ್ ಕುಟುಂಬಕ್ಕೆ ಬಿಜೆಪಿಗರು ಸಹಾಯ ಮಾಡಿದ್ದಾರಾ? ಸಂತೋಷ್ ಪಾಟೀಲ್ ಕುಟುಂಬವನ್ನು ಬಿಜೆಪಿಯವರು ಇದುವರೆಗೂ ಏಕೆ ಭೇಟಿ ಮಾಡಿಲ್ಲ? ಕೇವಲ ಮೊಸಳೆ ಕಣ್ಣೀರು ಸುರಿಸಿದರೆ ರಾಜ್ಯದ ಜನ ಮೋಸ ಹೋಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಮಾತನಾಡಿದ ಆಡಿಯೋ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ, ಈತನ ಮೇಲೆ 20 ರಿಂದ 30 ಪ್ರಕರಣಗಳು ದಾಖಲಾಗಿವೆ. ಆದರೂ ಬಿಜೆಪಿ ಈತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಣಿಕಂಠ ರಾಠೋಡ್‌ ನೇತೃತ್ವದಲ್ಲೇ ಬಿಜೆಪಿ ‘ಕಲಬುರಗಿ ಚಲೋ’ ಹಮ್ಮಿಕೊಂಡಿದೆ ಎಂದು ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದರು.

You cannot copy content of this page

Exit mobile version