Thursday, July 11, 2024

ಸತ್ಯ | ನ್ಯಾಯ |ಧರ್ಮ

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲ: ಮುಖ್ಯಮಂತ್ರಿ

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ. ಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಖಜಾನೆಯಿಂದ ವರ್ಗಾವಣೆಯಾಗಲು ಸಾಧ್ಯವಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ ಎಂದರು. ಸಿಬಿಐ, ಎಸ್.ಐ ಟಿ ಮತ್ತು ಇ. ಡಿ. ವತಿಯಿಂದ ಮೂರು ತನಿಖೆಗಳಾಗುತ್ತಿವೆ. ತನಿಖೆ ವರದಿ ಇನ್ನೂ ಬಂದಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಆರ್ಥಿಕ ಇಲಾಖೆ ಸಚಿವರಾಗಿರುವ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಜಿ. ಟಿ .ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜಿನಾಮೆ ನೀಡಬೇಕಲ್ಲ ಎಂದರು. ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ ಅಂತಿಮ ವರದಿಯಾಗಲಿ ಬಂದಿಲ್ಲ. ಆರೋಪಪಟ್ಟಿ ಹಾಕಿದ ಮೇಲೆ ವರದಿ ಬರುತ್ತದೆ ಎಂದರು.

ಖಜಾನೆಯಿಂದ ಹಣ ವರ್ಗಾವಣೆಯಾಗಿರುವುದು ಇಲಾಖೆಯ ಗಮನಕ್ಕೆ ಬರಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರತಿ ಸಾರಿಯೂ ನನ್ನ ಬಳಿ ಬರುವುದಿಲ್ಲ. ಎಷ್ಟು ಹಣವಿದೆಯೋ ಅಷ್ಟನ್ನು ಅಧಿಕಾರಿಗಳು ಬಿಡುಗಡೆ ಮಾಡುತ್ತಾರೆ. ಅದಕ್ಕೆ ನನ್ನ ಸಹಿ ಅಗತ್ಯವಿಲ್ಲ. ಪ್ರಕರಣದ ತನಿಖೆ ಇನ್ನೂ ಮುಗಿದೇ ಇಲ್ಲ. ತನಿಖೆ ಮಾಡಿ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು