2024ರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದ್ದು, ಡಿಸೆಂಬರ್ 31 ರ ರಾತ್ರಿ 12 ಗಂಟೆಯಿಂದ 2 ಗಂಟೆಯವರೆಗೆ ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, 2024ರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದ್ದು, ಎಂ.ಜಿ. ರಸ್ತೆಯಲ್ಲಿ ಅತಿಹೆಚ್ಚು ಜನರು ಸೇರುವುದರಿಂದ ಡಿಸೆಂಬರ್ 31ರಂದು ರಾತ್ರಿ 11 ಗಂಟೆಯಿಂದ 2 ಗಂಟೆಯವರೆಗೆ ನಿಲ್ದಾಣದ ಬಾಗಿಲುಗಳನ್ನು ಬಂದ್ ಮಾಡಲು ಸೂಚಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಎಂ ಜಿ ರಸ್ತೆಯ ಬದಲು ಸಮೀಪದ ಟ್ರಿನಿಟಿ ವೃತ್ತ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಮೂಲಕ ಜನರು ಪ್ರಯಾಣಿಸಬಹುದು ಎಂದು ಮಾಹಿತಿ ನೀಡಿದ್ದಾರೆ.