Friday, June 20, 2025

ಸತ್ಯ | ನ್ಯಾಯ |ಧರ್ಮ

ಡಿ. 31ರ ರಾತ್ರಿ 12 ಗಂಟೆ ಮೇಲೆ ಎಮ್‌ ಜಿ ರೋಡಲ್ಲಿ ಮೆಟ್ರೋ ಇರಲ್ಲ

2024ರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದ್ದು, ಡಿಸೆಂಬರ್ 31 ರ ರಾತ್ರಿ 12 ಗಂಟೆಯಿಂದ 2 ಗಂಟೆಯವರೆಗೆ ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಬಿ. ದಯಾನಂದ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, 2024ರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದ್ದು, ಎಂ.ಜಿ. ರಸ್ತೆಯಲ್ಲಿ ಅತಿಹೆಚ್ಚು ಜನರು ಸೇರುವುದರಿಂದ ಡಿಸೆಂಬರ್‌ 31ರಂದು ರಾತ್ರಿ 11 ಗಂಟೆಯಿಂದ 2 ಗಂಟೆಯವರೆಗೆ ನಿಲ್ದಾಣದ ಬಾಗಿಲುಗಳನ್ನು ಬಂದ್‌ ಮಾಡಲು ಸೂಚಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಎಂ ಜಿ ರಸ್ತೆಯ ಬದಲು ಸಮೀಪದ ಟ್ರಿನಿಟಿ ವೃತ್ತ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಮೂಲಕ ಜನರು ಪ್ರಯಾಣಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page