ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿರುವ ರನ್ಯಾ ರಾವ್ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಜಾಮೀನು ಕೋರಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ 64ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದೆ.
ರನ್ಯಾ ರಾವ್ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಲಿಂಕ್ ಗಳು ಇವೆ. ಕಸ್ಟಮ್ಸ್ ಬ್ಯಾಗೇಜ್ ನಿಯಮ ಉಲ್ಲಂಘನೆ ಮಾಡಲಾಗಿದೆ. ಹೊರ ಬಂದಲ್ಲಿ ಸಾಕ್ಷಿನಾಶ ಮತ್ತು ತನಿಖೆಯ ದಾರಿತಪ್ಪಿಸಿ ಸಾಧ್ಯತೆ ಇದೆ. ರನ್ಯಾ ರಾವ್ ಒಂದು ವರ್ಷದ ಅವಧಿಯಲ್ಲಿ 27 ಬಾರಿ ವಿದೇಶಿ ಪ್ರಯಾಣ ಮಾಡಿದ್ದಾರೆ. ಪ್ರಭಾವಿ ಆಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದೆ.
ಜಾಮೀನು ಅರ್ಜಿ ವಜಾ ಗೊಂಡಿರುವುದರಿಂದ ನಟಿ ರನ್ಯಾ ರಾವ್ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿಯೇ ಇರಬೇಕಾಗುತ್ತದೆ. ಈ ಪ್ರಕರಣದಲ್ಲಿ ಅನೇಕ ಪ್ರಮುಖ ವಿಚಾರಗಳು ಇವೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಮೂಲದ ಉದ್ಯಮಿಯೊಬ್ಬರನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ ತನ್ನ ವಶಕ್ಕೆ ಪಡೆದುಕೊಂಡಿದೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಮಾರ್ಚ್ 29ರವರೆಗೆ ಡಿಆರ್‌ಐ ವಶದಲ್ಲಿ ಇರಲಿದ್ದಾರೆ ಎಂದು ವರದಿಗಳು ತಿಳಿಸಿವೆ. ದ ಚಿನ್ನವನ್ನು ವಿಲೇವಾರಿ ಮಾಡಲು ಮತ್ತು ಮಾರಾಟದ ಆದಾಯವನ್ನು ಹಂಚಿಕೊಳ್ಳಲು ಸಾಹಿಲ್ ಜೈನ್ ನಟಿ ರನ್ಯಾ ರಾವ್ ಅವರಿಗೆ ಸಾಹಿಲ್ ಜೈನ್ ಸಹಕಾರ ನೀಡಿದ್ದಾರೆ ಎನ್ನಲಾಗುತ್ತಿದೆ.