ಕಾಂಗ್ರೆಸ್ ಇಲ್ಲದ ತೃತೀಯ ರಂಗಕ್ಕೆ ಡಿಎಂಕೆ ಮುನ್ನುಡಿ?: ಪ್ರಾದೇಶಿಕ ನಾಯಕರನ್ನು ಭೇಟಿಯಾಗುತ್ತಿರುವ ಕನಿಮೊಳಿ

ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಪಕ್ಷವನ್ನು ಬದಿಗೊತ್ತಿ ಹೊಸದಾಗಿ ‘ತೃತೀಯ ರಂಗ’ (Third Front) ರಚಿಸಲು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮುಂದಾಗಿದೆಯೇ ಎಂಬ ಚರ್ಚೆ ರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತೀಚಿನ ಮಹತ್ವದ ರಾಜಕೀಯ ಬೆಳವಣಿಗೆಗಳು ಈ ರೀತಿಯ ಲೆಕ್ಕಾಚಾರಗಳಿಗೆ ಇಂಬು ನೀಡುತ್ತಿವೆ.

ಕಳೆದ ಕೆಲವು ವಾರಗಳಿಂದ ಡಿಎಂಕೆ ಹಿರಿಯ ಸಂಸದೆ ಕನಿಮೊಳಿ ಅವರು ವಿವಿಧ ಪ್ರಾದೇಶಿಕ ಪಕ್ಷಗಳ ಪ್ರಮುಖ ನಾಯಕರನ್ನು ಸತತವಾಗಿ ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಹಾಗೂ ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಅವರನ್ನು ಕನಿಮೊಳಿ ಈಗಾಗಲೇ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದರ ಬೆನ್ನಲ್ಲೇ, ಕನಿಮೊಳಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಲು ಕೋಲ್ಕತ್ತಾಗೆ ತೆರಳಲಿದ್ದಾರೆ ಎಂಬ ವರದಿಗಳು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿವೆ. ಕಾಂಗ್ರೆಸ್ ಪಕ್ಷದ ನಾಯಕತ್ವವನ್ನು ಹೊರಗಿಟ್ಟು ಪ್ರಬಲ ಪ್ರಾದೇಶಿಕ ಪಕ್ಷಗಳನ್ನು ಒಂದೇ ವೇದಿಕೆಯಡಿ ತರಲು ಡಿಎಂಕೆ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆಯೇ ಎಂಬ ಅನುಮಾನಗಳಿಗೆ ಈ ಸರಣಿ ಭೇಟಿಗಳು ಕಾರಣವಾಗಿವೆ.

Related Articles

ಇತ್ತೀಚಿನ ಸುದ್ದಿಗಳು