ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಹಾವೇರಿಯಲ್ಲಿ ನಡೆಯಲಿದೆ.
ಈ ಸಾಹಿತ್ಯ ಸಮ್ಮೇಳನವು ಹಾವೇರಿಯ ಹುಬ್ಬಳ್ಳಿ ರಸ್ತೆಯಲ್ಲಿ ಇರುವ ʼಶ್ರೀ ಅಜ್ಜಯ್ಯ ದೇವಸ್ಥಾನದʼ ಎದುರು 2023 ಜನವರಿ 6, 7, 8ನೇ ತಾರೀಕಿನ ವರೆಗೆ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾದ ಡಾ. ದೊಡ್ಡರಂಗೇಗೌಡ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ʼಕನ್ನಡಿಗರೆಲ್ಲರ ಹಬ್ಬʼ ಆಗಿರುವುದರಿಂದ, ಎಲ್ಲಾ ಕನ್ನಡಿಗರು ಸಮಾನರು ಹಾಗು ಅವರೆಲ್ಲರಿಗೂ ಸಮಾನ ಗೌರವ ಸಿಗುವುದೆಂದು ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ.
ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆದೇಶ ಹೊರಡಿಸಿದ್ದು, ಕಾರ್ಯಕ್ರಮದಲ್ಲಿ ಶಬ್ದ ಮಾಲಿನ್ಯವಾಗದಂತೆ ನೋಡಿಕೊಳ್ಳುವುದಾಗಿ ಆದೇಶಿಸಿದೆ.
ಸಾರ್ವಜನಿಕ ಸ್ನೇಹಿಯಾಗುವ ಉದ್ದೇಶದಿಂದ ಕಾರ್ಯಕ್ರಮವನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕೆಂದು ಸೂಚಿಸಿದ್ದು, ಕನ್ನಡ ಸಾಹಿತ್ಯ ಪರಿಷತ್ತು ನ್ಯಾಯಾಲಯದ ಆದೇಶಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಎಲ್ಲರು ಈ ಸೂಚನೆಗಳನ್ನು ಸಹಕರಿಸಿ, ಪಾಲಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ.