ಬೆಂಗಳೂರು : ಗರುಕರ್ನಾಟಕ ರಾಜ್ಯದಲ್ಲಿ 2025–26ನೇ ಸಾಲಿನಲ್ಲಿ ಜನವರಿ ಅಂತ್ಯದ ವರೆಗೆ ₹1.30 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ ಆಗಿದೆ ಎಂದು ಪಂಕಜ್ ಚೌಧರಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಕಳೆದ ವರ್ಷದಿಂದ ಈ ವರ್ಷ ಹೆಚ್ಚುವ ಸಾಧ್ಯತೆ ಇದೆ. ಪ್ರತ್ಯೇಕ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ‘ರಾಜ್ಯಗಳಿಗೆ ಜಿಎಸ್‌ಟಿ ನಷ್ಟ ಪರಿಹಾರ ಬಿಡುಗಡೆಗೆ ಬಾಕಿ ಇಲ್ಲ. ಕರ್ನಾಟಕಕ್ಕೆ 2022–23 ಹಾಗೂ 2023–24ರಲ್ಲಿ ₹21,482 ಕೋಟಿ ನಷ್ಟ ಪರಿಹಾರ ಬಿಡುಗಡೆ ಮಾಡಲಾಗಿದೆ‘ ಎಂದು ಮಾಹಿತಿ ನೀಡಿದ್ದಾರೆ.
