Monday, December 23, 2024

ಸತ್ಯ | ನ್ಯಾಯ |ಧರ್ಮ

ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವವರ ಬಂಧನ

ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ಮೊಬೈಲ್ ಕ್ಯಾಮೆರಾ ವೀಡಿಯೊಗಳು ಸೆರೆಹಿಡಿದಿದೆ. ಭಾನುವಾರ, ಉಸ್ಮಾನಿಯಾ ವಿಶ್ವವಿದ್ಯಾಲಯದ ಸದಸ್ಯರ ಗುಂಪು ಅರ್ಜುನ್ ಅವರ ನಿವಾಸದ ಹೊರಗೆ ಟೊಮೆಟೊ, ಕಲ್ಲುಗಳನ್ನು ಎಸೆದಿರುವುದು ದೃಢವಾಗಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಕಾಲ್ತುಳಿತದಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕಲ್ಲು ತೂರಿ , ಹೂವಿನ ಕುಂಡಗಳನ್ನು ಪುಡಿ ಮಾಡಿ ಆಕ್ರೋಶ ಹೊರ ಹಾಕಿದ್ದರು.

ಅಲ್ಲು ಅರ್ಜುನ್ ಮನೆಯ ಮುಂದೆ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಅಲ್ಲು ಅರ್ಜುನ್ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆಕ್ರೋಶಗೊಂಡು ಮನೆಯ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page