Thursday, January 15, 2026

ಸತ್ಯ | ನ್ಯಾಯ |ಧರ್ಮ

ಪ್ರಿಯಾಂಕ್ ಖರ್ಗೆಗೆ ಬೆದರಿಕೆ: ಕರೆ ಮಾಡಿದ ವ್ಯಕ್ತಿಯ ಗುರುತು ಪತ್ತೆ, ಬಂಧನಕ್ಕೆ ಸಿದ್ಧತೆ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಕರೆ ಮಾಡಿದ್ದ ವ್ಯಕ್ತಿಯ ಮೂಲವನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ.

ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನೇಶ್ ನರೋಣ ಎಂದು ಗುರುತಿಸಲಾಗಿದೆ. ಆರ್‌ಎಸ್‌ಎಸ್ (RSS) ಬಗ್ಗೆ ಪ್ರಿಯಾಂಕ್ ಖರ್ಗೆ ಮಾತನಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ದಾನೇಶ್‌ ನರೋಣ ಎಂಬ ವ್ಯಕ್ತಿ ಸಚಿವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ.

ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ದೂರು ನೀಡಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮುಖಂಡರಾದ ಮನೋಹರ್ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಕರೆ ಮಾಡಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಬೆಂಗಳೂರು ಪೊಲೀಸರು ದಾನೇಶ್ ನರೋಣ ಅವರ ಜಾಡು ಹಿಡಿದು ಮಹಾರಾಷ್ಟ್ರಕ್ಕೆ ತೆರಳಿದ್ದು, ಆರೋಪಿಯನ್ನು ಶೀಘ್ರದಲ್ಲಿಯೇ ಬಂಧಿಸುವ ನಿರೀಕ್ಷೆ ಇದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page