Home ರಾಜ್ಯ ಪ್ರಗತಿಪರ ಲೇಖಕರಿಗೆ ಬೆದರಿಕೆಯೊಡ್ಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು: ಗೃಹ ಮಂತ್ರಿ ಪರಮೇಶ್ವರ

ಪ್ರಗತಿಪರ ಲೇಖಕರಿಗೆ ಬೆದರಿಕೆಯೊಡ್ಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು: ಗೃಹ ಮಂತ್ರಿ ಪರಮೇಶ್ವರ

0

ರಾಜ್ಯದ ಪ್ರಗತಿಪರ ಸಾಹಿತಿಗಳು ಮತ್ತು ಚಿಂತಕರಿಗೆ ಬೆದರಿಕೆ ಹಾಕಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಗುರುವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ಪ್ರಗತಿಪರ ಸಾಹಿತಿಗಳು ಮತ್ತು ಚಿಂತಕರಿಗೆ ಬೆದರಿಕೆ ಹಾಕಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಬೆದರಿಕೆಗೆ ಒಳಗಾದ ಲೇಖಕರಿಗೆ ಭದ್ರತೆ ಒದಗಿಸುವಂತೆ ಪೊಲೀಸ್ ಆಯುಕ್ತರು ಮತ್ತು ಡಿಜಿಪಿ ಅವರಿಗೆ ಈಗಾಗಲೇ ಸೂಚಿಸಿದ್ದೇನೆ ಎಂದರು.

“ಲೇಖಕರು ಭೇಟಿಗೆ ಸಮಯ ಕೇಳಿದ್ದು, ನಾನು ಅವರನ್ನು ಭೇಟಿ ಮಾಡುತ್ತೇನೆ. ಬೆದರಿಕೆ ಪತ್ರವನ್ನು ಡಿಜಿಪಿಗೆ ಕಳುಹಿಸಲಾಗುವುದು. ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರಾದ ಗೌರಿ ಲಂಕೇಶ್ ಮತ್ತು ಪ್ರೊ.ಎಂ.ಎಂ. ಕಲಬುರ್ಗಿಯವರ ಹತ್ಯೆಗಳನ್ನು ನಾವು ಮರೆತಿಲ್ಲ.” ಎಂದು ಸಚಿವ ಪರಮೇಶ್ವರ ಹೇಳಿದರು.

ಈ ಹಿನ್ನೆಲೆಯಲ್ಲಿ ಇಂತಹ ಬೆದರಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದೂ ಅವರು ಹೇಳಿದರು.

“ಲೇಖಕರು ಮತ್ತು ಪ್ರಗತಿಪರ ಚಿಂತಕರನ್ನು ಭೇಟಿಯಾದ ನಂತರ, ಬೆದರಿಕೆಯ ನಿಖರವಾದ ವಿವರಗಳನ್ನು ನಾನು ತಿಳಿಯುತ್ತೇನೆ” ಎಂದು ಅವರು ಹೇಳಿದರು.

ಸುಮಾರು 15ಕ್ಕೂ ಹೆಚ್ಚು ಪ್ರಗತಿಪರ ಸಾಹಿತಿಗಳು ಹಾಗೂ ಚಿಂತಕರ ಹೆಸರು ಹೇಳಿ ಎಲ್ಲರನ್ನೂ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಪ್ರಗತಿಪರ ಚಿಂತಕರಿಗೆ ಬೆದರಿಕೆ ಹಾಕಲಾಗಿತ್ತು.

ಸೆಪ್ಟಂಬರ್ 5, 2017ರಂದು ಬೆಂಗಳೂರಿನ ತಮ್ಮ ನಿವಾಸದ ಹೊರಗೆ ಹೋರಾಟಗಾರ್ತಿ, ಲೇಖಕಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು 10,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯನ್ನು ಬಂಧಿಸಲಾಗಿದೆ.

ಪ್ರಾಧ್ಯಾಪಕ ಎಂ.ಎಂ. ಕಲಬುರ್ಗಿ ಅವರನ್ನು 2015ರ ಆಗಸ್ಟ್ 30ರಂದು ಧಾರವಾಡದ ಅವರ ನಿವಾಸದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಹಂತಕರು ಅವರನ್ನು ಪಾಯಿಂಟ್-ಬ್ಲಾಂಕ್ ರೇಂಜ್ನಲ್ಲಿ ಶೂಟ್ ಮಾಡಿದ್ದಾರೆ. ಕಲಬುರ್ಗಿಯವರು ವಿದ್ವಾಂಸರು ಮತ್ತು ಆಮೂಲಾಗ್ರ ಧ್ವನಿ ಎಂದು ಹೆಸರಾಗಿದ್ದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯಿಂದ ಪ್ರಕರಣದ ಕೆಲವು ಆರೋಪಿಗಳು ಕಲಬುರ್ಗಿ ಹತ್ಯೆಗೂ ನಂಟು ಹೊಂದಿರುವುದು ಬೆಳಕಿಗೆ ಬಂದಿದೆ.

ಕಲಬುರ್ಗಿ ಅವರ ಪತ್ನಿ ಉಮಾದೇವಿ ಕಲಬುರ್ಗಿ ಕೂಡ ನ್ಯಾಯಕ್ಕಾಗಿ ಆಗ್ರಹಿಸಿ ಮತ್ತು ತನಿಖೆಯ ವಿಳಂಬವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು.

You cannot copy content of this page

Exit mobile version