Wednesday, July 30, 2025

ಸತ್ಯ | ನ್ಯಾಯ |ಧರ್ಮ

ದೊಡ್ಡ ದೊಡ್ಡ ಬ್ಯಾಂಕ್ ಗಳಿಗೆ ಬೆದರಿಕೆ ಕರೆ : ಹಣಕಾಸು ಸಚಿವರ ರಾಜೀನಾಮೆಗೆ ಪಟ್ಟು

ಆರ್‌ಬಿಐ ಕಚೇರಿ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು  ಐಸಿಐಸಿಐ  ಬ್ಯಾಂಕ್‌ಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗುವುದು ಎಂದು  ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಮಂಗಳವಾರ ಬೆದರಿಕೆ ಇಮೇಲ್ ಬಂದಿದೆ.

ಇಮೇಲ್ ನಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಲ್ಲದೆ, ಮುಂಬೈನ 11 ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಿದ ಎಲ್ಲಾ ಸ್ಥಳಗಳಲ್ಲಿ ಪೊಲೀಸರು ಪರಿಶೀಲಿಸಿದ ನಂತರ ಯಾವುದೇ ಬಾಂಬ್ ಅಥವಾ ಸ್ಪೋಟಕಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

“ಬೆದರಿಕೆ ಬಂದ ಮುಂಬೈನ 11 ಪ್ರಮುಖ ಸ್ಥಳಗಳಲ್ಲಿ ಒಟ್ಟು 11 ಬಾಂಬ್ ಬೆದರಿಕೆಗಳು ಬಂದಿದ್ದು, ಪೊಲೀಸರು ಈ ಎಲ್ಲ ಸ್ಥಳಗಳಿಗೆ ತೆರಳಿ ತನಿಖೆ ನಡೆಸಿದರೂ ಏನೂ ಪತ್ತೆಯಾಗಿಲ್ಲ.

“ನಾವು ಮುಂಬೈನ ವಿವಿಧ ಸ್ಥಳಗಳಲ್ಲಿ 11 ಬಾಂಬ್‌ಗಳನ್ನು ಇರಿಸಿದ್ದೇವೆ. ಆರ್‌ಬಿಐ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಭಾರತದ ಇತಿಹಾಸದಲ್ಲಿ ಕಂಡು ಕೇಳರಿಯದ ಅತಿದೊಡ್ಡ ಹಗರಣವನ್ನು ಕಾರ್ಯಗತಗೊಳಿಸಿವೆ. ಈ ಹಗರಣದಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೆಲವು ಉನ್ನತ ಬ್ಯಾಂಕಿಂಗ್ ಅಧಿಕಾರಿಗಳು ಮತ್ತು ಕೆಲವು ಕೇಂದ್ರ ಮಂತ್ರಿಗಳು ಭಾಗಿಯಾಗಿದ್ದಾರೆ, ಇದಕ್ಕೆ ನಮ್ಮ ಬಳಿ ಸಾಕಷ್ಟು ದೃಢವಾದ ಪುರಾವೆಗಳಿವೆ, ಎಂದು ಉಲ್ಲೇಖಿಸಲಾಗಿದೆ.

“ಆರ್‌ಬಿಐ ಗವರ್ನರ್ ಮತ್ತು ಹಣಕಾಸು ಮಂತ್ರಿ ಇಬ್ಬರೂ ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಮತ್ತು ಹಗರಣದ ಸಂಪೂರ್ಣ ಬಹಿರಂಗಪಡಿಸುವಿಕೆಯೊಂದಿಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರಿಬ್ಬರಿಗೂ ಮತ್ತು ಅವರಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅವರು ಅರ್ಹವಾದ ಶಿಕ್ಷೆಯನ್ನು ನೀಡಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ, ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮಧ್ಯಾಹ್ನ 1.30 ರ ಮೊದಲು, ಎಲ್ಲಾ 11 ಬಾಂಬ್‌ಗಳು ಒಂದೊಂದಾಗಿ ಸ್ಫೋಟಿಸುತ್ತವೆ,” ಎಂದು ಇಮೇಲ್ ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page