Friday, May 9, 2025

ಸತ್ಯ | ನ್ಯಾಯ |ಧರ್ಮ

ಯುದ್ಧದ ಕಾರ್ಮೋಡ : ಪಂಜಾಬ್ ನಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ

ಭಾರತದ ಮೇಲೆ ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ನಲ್ಲಿ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಯಾವುದೇ ಸಂದರ್ಭದಲ್ಲೂ ಗಡಿ ರಾಜ್ಯಗಳ ಮೇಲೆ ತೀವ್ರ ದಾಳಿಯ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಈ ನಿಲುವು ತೆಗೆದುಕೊಳ್ಳಲಾಗಿದೆ.

ಪಂಜಾಬ್ ನ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ರಾಜ್ಯದ ಶಾಲಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ.

ಈಗಾಗಲೇ ಜಮ್ಮು ಕಾಶ್ಮೀರದ ಉರಿ ಸೇರಿದಂತೆ ಗುರುವಾರ ತಡರಾತ್ರಿ ಜಮ್ಮು ವಾಯುನೆಲೆಗಳ ಮೇಲೆ ಪಾಕಿಸ್ತಾನ ಏಕಾಏಕಿ ಕ್ಷಿಪಣಿ ದಾಳಿ ನಡೆಸಿತ್ತು. ಮುಂದಿನ ಹಂತವಾಗಿ ಅಂತರರಾಷ್ಟ್ರೀಯ ಗಡಿ ರಾಜ್ಯಗಳಾದ ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page