Home ವಿದೇಶ ಜರ್ಮನಿಯಲ್ಲಿ ಅಗ್ನಿ ದುರಂತ: ಇಬ್ಬರು ಯುವತಿಯರು ಸೇರಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು; ಕೊಲೆ ಆರೋಪದಡಿ...

ಜರ್ಮನಿಯಲ್ಲಿ ಅಗ್ನಿ ದುರಂತ: ಇಬ್ಬರು ಯುವತಿಯರು ಸೇರಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು; ಕೊಲೆ ಆರೋಪದಡಿ ಸ್ಥಳೀಯ ನಿವಾಸಿ ಬಂಧನ

0

ಬೋಚುಮ್ (ಜರ್ಮನಿ): ಜರ್ಮನಿಯ ನಾರ್ತ್ ರೈನ್-ವೆಸ್ಟ್‌ಫಾಲಿಯಾ ಪ್ರಾಂತ್ಯದ ಬೋಚುಮ್ ನಗರದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವತಿಯರು ಮತ್ತು ಓರ್ವ ಯುವಕ ಸೇರಿದಂತೆ ಮೂವರು ಭಾರತೀಯ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪದಡಿ ಸ್ಥಳೀಯ ನಿವಾಸಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬರ್ಲಿನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಬುಧವಾರ (ಸ್ಥಳೀಯ ಕಾಲಮಾನ) ಈ ದುರಂತವನ್ನು ಖಚಿತಪಡಿಸಿದೆ. “ಜರ್ಮನಿಯ ನಾರ್ತ್ ರೈನ್-ವೆಸ್ಟ್‌ಫಾಲಿಯಾದ ಬೋಚುಮ್‌ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೂವರು ಭಾರತೀಯ ಪ್ರಜೆಗಳು (ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ) ದುರದೃಷ್ಟವಶಾತ್ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಮೂವರೂ ಜರ್ಮನಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು,” ಎಂದು ರಾಯಭಾರ ಕಚೇರಿ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ತಿಳಿಸಿದೆ.

ರಾಯಭಾರ ಕಚೇರಿಯು ಸ್ಥಳೀಯ ಅಧಿಕಾರಿಗಳು ಹಾಗೂ ಮೃತ ವಿದ್ಯಾರ್ಥಿಗಳ ಕುಟುಂಬಸ್ಥರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮೃತದೇಹಗಳನ್ನು ಭಾರತಕ್ಕೆ ತರುವುದು ಸೇರಿದಂತೆ ಅಗತ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You cannot copy content of this page

Exit mobile version