Friday, July 12, 2024

ಸತ್ಯ | ನ್ಯಾಯ |ಧರ್ಮ

ಮಂಡ್ಯ | ಕಾರು-ಗೂಡ್ಸ್‌ ವಾಹನದ ನಡುವೆ ಅಪಘಾತ: ಚಿತ್ರದುರ್ಗದ ಮೂವರ ದುರ್ಮರಣ

ಮಂಡ್ಯ/ಚಿತ್ರದುರ್ಗ: ವೇಗವಾಗಿ ಬಂದ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಮೂವರು ದುರ್ಮರಣ ಹೊಂದಿರುವ ಘಟನೆ ನಾಗಮಂಗಲ ಹಾಗೂ ಪಾಂಡವಪುರ ಹೆದ್ದಾರಿಯ ಶ್ರೀರಾಮನಹಳ್ಳಿ ಬಳಿ ನಡೆದಿದೆ.

ಮೂವರು ಪ್ರಯಾಣಿಕರು ಕಾರಿನಲ್ಲಿ ಬರುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡಿದಿದೆ.ಡಿಕ್ಕಿ ರಭಸಕ್ಕೆ ರಸ್ತೆಯಿಂದ ಪಕ್ಕಕ್ಕೆ ಸರಿದು, ಕಂಬವೊಂದಕ್ಕೆ ಗುದ್ದಿ ಕಾರಿನ ಎಡಭಾಗವು ಛಿದ್ರಛಿದ್ರಗೊಂಡು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಚಿತ್ರದುರ್ಗದ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಗಳಾದ ಚಿಕ್ಕಜಾಜೂರು ಸಮೀಪದ ಅರಸನಘಟ್ಟದ ಯುವರಾಜ್‌, ಮುತ್ತಗದೂರಿನ ತಿಪ್ಪೇಸ್ವಾಮಿ ಹಾಗೂ ಹಿರೇಎಮ್ಮಿಗನೂರಿನ ಎಚ್‌.ಸಿದ್ದೇಶ್‌ ಎಂದು ಗುರುತಿಸಲಾಗಿದೆ.

ತೀವ್ರ ಗಾಯಗೊಂಡಿದ್ದ ಚಿಕ್ಕಜಾಜೂರು ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ನಟರಾಜ್ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿ.ದುರ್ಗದ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ವಿಜಯ ಕುಮಾರ್‌, ದಂಡಿಗೇನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ದರ್ಶನ್‌ ಗಾಯಗೊಂಡಿದ್ದಾರೆ.

ಮೃತ ದೇಹಗಳನ್ನು ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು