ಕಲುಷಿತ ನೀರು ಸೇವನೆಯಿಂದ ಒಂದೇ ಗ್ರಾಮದ ಮೂವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ವರದಿಯಾಗಿದೆ. ಸುರಪುರ ತಾಲ್ಲೂಕಿನ ತಿಪ್ಪನಟಗಿಯಲ್ಲಿ ಸಾವಿನ ಪ್ರಕರಣ ದಾಖಲಾಗಿದೆ. ಮೂವರು ಮೃತಪಟ್ಟಿದ್ದಲ್ಲದೇ ಇನ್ನೂ ಆರು ಮಂದಿ ಸ್ಥಿತಿ ಗಂಭೀರವಾಗಿದೆ.
ಕಳೆದ ಹತ್ತು ದಿನಗಳಿಂದ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯ ಕಾರಣದಿಂದ ಬೇರೆ ಬೇರೆ ಖಾಸಗಿ, ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆರು ಜನರ ಸ್ಥಿತಿ ಗಂಭೀರವಾಗಿದೆ. ಈಗಾಗಲೇ ಆಸ್ಪತ್ರೆಗೆ ಸೇರಿರುವವರಲ್ಲಿ ಕೆಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ.
ತಿಪ್ಪನಟಗಿ ಗ್ರಾಮಕ್ಕೆ ಸ್ಥಳಕ್ಕೆ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಸುರಪುರ ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ ಬಿರಾದಾರ ಅವರಿಗೆ ಉಸ್ತುವಾರಿ ಸಚಿವ ದರ್ಶನಾಪುರ ಆದೇಶಿಸಿದ್ದಾರೆ.