ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ 8.30ರ ಸುಮಾರಿಗೆ ಗುಂಡಿನ ದಾಳಿ ಆರಂಭವಾಗಿದ್ದು, ಸುಮಾರು ಒಂದು ಗಂಟೆ ಕಾಲ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾವೋವಾದಿಗಳ ಪ್ರಮುಖ ನೆಲೆಯಾದ ಪಮೇಡ ಪೊಲೀಸ್ ಠಾಣೆ ವ್ಯಾಪ್ತಿಯ ಜಿಡ್ಪಲ್ಲಿ ಗ್ರಾಮದ ಬಳಿ ಸೋಮವಾರ ಹೊಸ ಶಿಬಿರ ಆರಂಭಿಸಲಾಗಿದ್ದು, ಈ ಶಿಬಿರದ ಹೊರ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದರು.
ಮಾವೋವಾದಿಗಳು ಬ್ಯಾರೆಲ್ ಗ್ರೆನೇಡ್ ಲಾಂಚರ್‌ಗಳಿಂದ ಶೆಲ್‌ಗಳನ್ನು ಹಾರಿಸಿದ್ದಾರೆ ಎಂದು ಹೇಳಿದರು. ಗುಂಡಿನ ದಾಳಿಯಲ್ಲಿ ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಿದರು. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.