ಹಾಸನ: ಹೊಳೆನರಸೀಪುರ ತಾಲ್ಲೂಕಿನ ಎಡೇಗೌಡನಹಳ್ಳಿ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ನಡೆದಿದೆ.
KA-03 KS-3630 ನಂಬರ್‌ನ ಬೈಕ್‌ನಲ್ಲಿ ತೆರಳುತ್ತಿದ್ದ ಇರ್ಫಾನ್ (25), ತರುಣ್ (26) ಮತ್ತು ರೇವಂತ್ (27) ದುರಂತದಲ್ಲಿ ಸಾವಿಗೀಡಾದವರು. ಡಿಕ್ಕಿಯ ರಭಸಕ್ಕೆ ಓರ್ವ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಹಳ್ಳಿಮೈಸೂರು ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.