Wednesday, August 20, 2025

ಸತ್ಯ | ನ್ಯಾಯ |ಧರ್ಮ

ತುಮಕೂರು ದಾವಣಗೆರೆ ರೈಲ್ವೆ ಸಂಪರ್ಕ ಯೋಜನೆ ಪ್ರಾರಂಭಿಸಲು ಕ್ರಮ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಇಂದು ಸಿಎಂ ಬೊಮ್ಮಾಯಿ  ಹೊಸದುರ್ಗ ಕಾರ್ಯಕ್ರಮಕ್ಕೆ ತೆರಳುವ ಮುನ್ನ ತುಮಕೂರು ದಾವಣಗೆರೆ ರೈಲ್ವೆ ಲೈನ್ ಬಗ್ಗೆ ಮಾಧ್ಯಮದವರ ಮುಂದೆ ಮಾತನಾಡಿದರು.

ತುಮಕೂರು ದಾವಣಗೆರೆ ರೈಲ್ವೆ ಲೈನ್ ಬಗ್ಗೆ ಪರಾಮರ್ಶೆ ಮಾಡಲಾಗಿದೆ. ಈ ಯೋಜನೆಗೆ ಭೂ ಸ್ವಾದೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಚಿತ್ರದುರ್ಗ ಮೂಲಕ ತುಮಕೂರು ದಾವಣಗೆರೆ ರೈಲ್ವೆ ಸಂಪರ್ಕ ಯೋಜನೆ ಪ್ರಾರಂಭಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಬೇಕಾದ ಹಣವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ನ್ಯಾಯಾಂಗದ ಪ್ರಮುಖ ಕಾರ್ಯಕ್ರಮ ಮತ್ತು ಈ ಭಾಗದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೊಸದುರ್ಗಕ್ಕೆ ಬಂದಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ 1.7 ಕಿ.ಮೀ.ಭೂಸ್ವಾಧೀನ ಕಾರ್ಯ  ಎರಡು ವರ್ಷದಿಂದ ನೆನೆಗುದಿಗೆ ಬಿದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೆಲವು ರೈತರ ಸಮಸ್ಯೆಯಿದ್ದು, ಅದನ್ನು ನಿವಾರಿಸಲಾಗುವುದು ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page