ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ದೊಡ್ಡ ಕೋಲಾಹಲವೇ ಎಬ್ಬಿಸಿತ್ತು. ಈಗ ಈ ಕೇಸ್ ರದ್ದುಪಡಿಸುವಂತೆ ಧರ್ಮಸ್ಥಳ ವಿರುದ್ಧ ನಿಂತಿದ್ದ ತಂಡದಿಂದ ಈಗ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ, ಎಸ್‌ಐಟಿ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಆರಂಭಿಕ ಹಂತದಲ್ಲಿ ಎಲ್ಲಾ ಹೇಳಿಕೆಯಲ್ಲಿ ಎಸ್‌ಐಟಿ ತನಿಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಈ ತಂಡ ಇದೀಗ ನೇರವಾಗಿ ಎಸ್ಐಟಿ ತನಿಖೆಯ ಬಗ್ಗೆ ಅಪಸ್ವರ ಎತ್ತಿದೆ. ಹಾಗೆಯೇ ಎಫ್‌ಐಆರ್ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದೆ.
ಮಾಸ್ಕ್ ಮ್ಯಾನ್ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದು, ಆ ನಂತರ ಸುಜಾತಾ ಭಟ್ ಕೇಸಿನಲ್ಲಿ ಉಲ್ಟಾ ಹೊಡೆದಿದ್ದು ಸೇರಿದಂತೆ ಹಲವು ಬೆಳವಣಿಗೆಗಳು ತಮ್ಮ ಲೆಕ್ಕಾಚಾರದ ವಿರುದ್ಧವಾಗಿಯೇ ನಡೆದ ಹಿನ್ನೆಲೆಯಲ್ಲಿ ಈ ತಂಡ ಈಗ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದೆ.
ಧರ್ಮಸ್ಥಳದ ಸೌಜನ್ಯ ಪ್ರಕರಣ ಮಾಸ್ಕ್ ಮ್ಯಾನ್ ಚಿನ್ನಯ್ಯ ಎಂಟ್ರಿ ನಂತರ ಪ್ರಕರಣ ಇನ್ನೊಂದು ಮಗ್ಗುಲಿಗೆ ತೆರೆದುಕೊಂಡಿತ್ತು. ಚಿನ್ನಯ್ಯ ಸೃಷ್ಟಿಸಿದ ಸುಳ್ಳು ನರೇಟಿವ್ ಒಂದು ರೀತಿಯಲ್ಲಿ ಈ ತಂಡಕ್ಕೆ ಮತ್ತಷ್ಟು ಮುಜುಗರ ಸೃಷ್ಟಿಸಿತ್ತು. ಹೀಗಾಗಿ ಈ ತಂಡ ಇದೀಗ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಇಂದು ಅರ್ಜಿ ವಿಚಾರಣೆ ನಡೆಯಲಿದೆ.
