ದೆಹಲಿ,ಡಿಸೆಂಬರ್ 18: ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಕರ್ನಾಟಕ ಭವನದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಪ್ರಧಾನಮಂತ್ರಿಗಳು ಮುಖ್ಯಮಂತ್ರಿಗಳ ಭೇಟಿಗೆ ಸಮಯ ನೀಡಿದ್ದಾರೆ. ಮುಖ್ಯಮಂತ್ರಿಗಳು ಬರ ಪರಿಹಾರ, ನರೇಗಾ ಯೋಜನೆಯಲ್ಲಿ ಮಾನವ ಕೂಲಿ ದಿನಗಳ ಹೆಚ್ಚಳ ಸೇರಿದಂತೆ ಇತರೆ ಪ್ರಮುಖ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ.
ಪ್ರಧಾನಮಂತ್ರಿಗಳ ಭೇಟಿಗೆ ನನಗೆ ಇನ್ನು ಸಮಯ ನಿಗದಿಯಾಗಿಲ್ಲ. ಹೀಗಾಗಿ ಕೆಲವು ಕೇಂದ್ರ ಸಚಿವರ ಭೇಟಿಗೆ ಸಮಯ ಕೇಳಿದ್ದೇನೆ ಎಂದು ತಿಳಿಸಿದರು.