Thursday, June 20, 2024

ಸತ್ಯ | ನ್ಯಾಯ |ಧರ್ಮ

ಟಿಪ್ಪು ಎಕ್ಸ್‌ಪ್ರೆಸ್‌ ಇನ್ನುಮುಂದೆ ಒಡೆಯರ್ ಎಕ್ಸ್‌ಪ್ರೆಸ್‌ : ರೈಲಿನ ಹೆಸರು ಬದಲಾಯಿಸಿದ ಮೋದಿ ಸರ್ಕಾರ : ಪ್ರತಾಪ್ ಸಿಂಹ ಹರ್ಷ!

ಮೈಸೂರು – ಬೆಂಗಳೂರು ನಡುವೆ ಸಂಚರಿಸುತ್ತಿರುವ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ.

ಹೌದು, ಮೈಸೂರು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಟಿಪ್ಪು ಎಕ್ಸ್ಪ್ರೆಸ್ ಹೆಸರನ್ನು ತೆಗೆದು ‘ಒಡೆಯರ್ ಎಕ್ಸ್‌ಪ್ರೆಸ್’ಎಂದು ಬದಲಾಯಿಸಿ ಕೇಂದ್ರ ರೈಲ್ವೆ ಮಂಡಳಿ ಶುಕ್ರವಾರ ಆದೇಶ ಹೊರಡಿಸಿದೆ.

ಮೈಸೂರು- ತಾಳಗುಪ್ಪ ಎಕ್ಸ್ಪ್ರೆಸ್ ರೈಲಿಗೆ ಕುವೆಂಪು ಎಕ್ಸ್‌ಪ್ರೆಸ್’ ಎಂದು ನಾಮಕರಣ ಮಾಡಿರುವುದಾಗಿ ಮಂಡಳಿಯ ಉಪನಿರ್ದೇಶಕರಾದ ರಾಜೇಶ್ ಕುಮಾರ್ ನೈರುತ್ಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.

ರೈಲ್ವೇ ಸಚಿವಾಲಯದ ಆದೇಶ ಪತ್ರವನ್ನು ಟ್ವೀಟರ್ನಲ್ಲಿ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ, ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು- ತಾಳಗುಪ್ಪ ರೈಲು “ಕುವೆಂಪು ಎಕ್ಸ್ಪ್ರೆಸ್” ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್!ಎಂದು ಟ್ವೀಟ್ ಮಾಡಿದ್ದಾರೆ.

ಈ ನಡುವೆ ನಾಡ ಕಂಡ ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಮೈಸೂರು ಹುಲಿ ಟಿಪ್ಪು ಸುಲ್ತಾನ್ ವಿರುದ್ಧ ಬಿಜೆಪಿ ಸಾಲು ಸಾಲು ಆರೋಪಗಳನ್ನು ಮಾಡಿದ್ದರು‌. ಈಗ ಟಿಪ್ಪು ಹೆಸರಿದ್ದ ರೈಲಿನ ಹೆಸರನ್ನು ಸಹ ಬದಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು