‘1 ಲಕ್ಷ ಲಡ್ಡುಗಳನ್ನು ಅಯೋಧ್ಯೆಗೆ ಕಳುಹಿಸಲಾಗಿತ್ತು’, ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ವರದಿಗೆ ಆರ್‌ಎಸ್‌ಎಸ್ ಆಕ್ರೋಶ

ತಿರುಪತಿ ದೇವಸ್ಥಾನದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆ ಬಳಕೆ ವಿವಾದ ನಿಲ್ಲುತ್ತಿಲ್ಲ. ಇದೀಗ ಈ ಕುರಿತು ಮತ್ತೊಂದು ದೊಡ್ಡ ಮಾಹಿತಿ ಹೊರಬಿದ್ದಿದೆ. ತಿರುಪತಿ ದೇಗುಲದ ಲಡ್ಡು ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖವಾಣಿ ಪಾಂಚಜನ್ಯ ದೊಡ್ಡ ಆರೋಪವನ್ನೇ ಮಾಡಿದೆ.

ತಿರುಪತಿ ತಿರುಮಲ ದೇವಸ್ಥಾನದಿಂದ ಅಯೋಧ್ಯೆಗೆ 1 ಲಕ್ಷ ಲಡ್ಡುಗಳನ್ನು ಕಳುಹಿಸಲಾಗಿದೆ ಎಂದು ಮುಖವಾಣಿಯಲ್ಲಿ ಪ್ರಕಟವಾದ ವರದಿ ಹೇಳಿದೆ.

ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆಯ ದಿನದಂದು ತಿರುಪತಿ ದೇವಸ್ಥಾನದಿಂದ 1 ಲಕ್ಷ ಲಡ್ಡುಗಳನ್ನು ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಲಡ್ಡುಗಳನ್ನು ಅಯೋಧ್ಯೆಯಲ್ಲಿ ಭಕ್ತರಿಗೆ ಹಂಚಲಾಯಿತು. ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ದನದ ಕೊಬ್ಬು ಮತ್ತು ಮೀನಿನ ಎಣ್ಣೆಯನ್ನು ಬೆರೆಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಇದೆಲ್ಲ ನಡೆದಿದ್ದು ಅಂದಿನ ಆಂಧ್ರಪ್ರದೇಶದ ಜಗನ್ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ.

Related Articles

ಇತ್ತೀಚಿನ ಸುದ್ದಿಗಳು