Wednesday, July 9, 2025

ಸತ್ಯ | ನ್ಯಾಯ |ಧರ್ಮ

ಇಂದು ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ : 6 ದಿನಗಳ ನಿಷೇಧಾಜ್ಞೆ

ಚಿಕ್ಕಮಂಗಳೂರಿನಲ್ಲೂ ಕೂಡ ಮಹೇಶ ದಸರಾ ಆಚರಣೆ ಹಿನ್ನೆಲೆಯಲ್ಲಿ ಇಂದಿನಿಂದ 6 ದಿನ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಮಹಿಷ ದಸರ ಆಚರಣೆ ವಿಚಾರವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದರ ಜೊತೆಗೆ ಈ ಕಾರ್ಯಕ್ರಮಕ್ಕೆ ಪ್ರೋ.ಕೆ.ಎಸ್.ಭಗವಾನ್ ಅವರು ಆಗಮಿಸುವ ಹಿನ್ನೆಲೆಯಲ್ಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಚಿಕ್ಕಮಂಗಳೂರಿನಲ್ಲಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಹಿಷ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಂಘಟನೆಗಳಿಂದ ಮಹಿಷ ದಸರಾ ಆಯೋಜನೆ ಮಾಡಿದೆ. ಕಾರ್ಯಕ್ರಮಕ್ಕೆ ಸಂಘಟನೆಗಳ ಕಡೆಯಿಂದ ಮುಖ್ಯ ಅತಿಥಿಯಾಗಿ ಪ್ರೊ. ಕೆಎಸ್ ಭಗವಾನ್ ಅವರಿಗೆ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಪ್ರೊ. ಕೆಎಸ್ ಭಗವಾನ್ ಆಗಮನಕ್ಕೆ ಜಿಲ್ಲೆಯಯಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜರಿಂದ ಆದೇಶ ಹೊರಡಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page