Friday, June 14, 2024

ಸತ್ಯ | ನ್ಯಾಯ |ಧರ್ಮ

ʼಇಂಡಿಯಾʼ ಕೂಟದಿಂದ ಪ್ರಧಾನಿ ಅಭ್ಯರ್ಥಿ ಯಾರೆಂದು ಇಂದು ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ

ಮುಂಬೈ: ‌ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸುವುದು ಮತ್ತು ಮತ್ತು ಸಂವಿಧಾನವನ್ನು ಉಳಿಸುವುದು ನಮ್ಮ ಉದ್ದೇಶ. ಹೀಗಾಗಿ ಇಂಡಿಯಾ ಕೂಟದಿಂದ ಕಾರ್ಯತಂತ್ರ ಜಾರಿಯಲ್ಲಿದ್ದು, ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಇಂದಿನ ಸಭೆಯಲ್ಲಿ ನಿರ್ಧರಿಸಲಿದ್ದೇವೆ ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

543 ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 291 ಸ್ಥಾನಗಳನ್ನು ಹಾಗೂ ‘ಇಂಡಿಯಾ’ ಮೈತ್ರಿಕೂಟ 234 ಸ್ಥಾನಗಳು ಸಾಧಿಸಿವೆ. ಸರ್ಕಾರ ರಚಿಸುವ ಕಸರತ್ತು ಎರಡು ಕೂಟಗಳಲ್ಲೂ ಜಾರಿಯಲ್ಲಿದ್ದು, ಈ ಸಂಬಂಧ ಎನ್‌ಡಿಎ ಹಾಗೂ ಇಂಡಿಯಾ ನಾಯಕರು ಇಂದು ಸಭೆ ಸೇರಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ‘ಇಂಡಿಯಾ’ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗಾಣಿಸುವುದರ ಜತೆಗೆ ಸಂವಿಧಾನವನ್ನು ಉಳಿಸಬೇಕೆಂದು ನಮ್ಮ ಕೂಟದ ಉದ್ದೇಶವಾಗಿತ್ತು ಎಂದು ಹೇಳಿದ್ದಾರೆ.

ಈ ಬಾರಿ ಮಹಾರಾಷ್ಟ್ರದಲ್ಲಿ 45 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಕೇವಲ 17 ಸ್ಥಾನಗಳು ಸಿಕ್ಕಿವೆ. ಆದರೆ, ನಾವು (ಇಂಡಿಯಾ ಬಣ) 28 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ ಎಂದಿದ್ದಾರೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡುಗೆ ಕಿರುಕುಳ ನೀಡುತ್ತಿದೆ ಎಂದು ಠಾಕ್ರೆ ಆರೋಪಿಸಿದ್ದಾರೆ.

ಸಂವಿಧಾನ ವಿರೋಧಿಗಳು ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ದೇಶದಲ್ಲಿ ಸ್ಥಾನವಿಲ್ಲ ಎಂಬುದನ್ನು ದೇಶದ ಜನರು ತೋರಿಸಿಕೊಟ್ಟಿದ್ದಾರೆ ಎಂದು ಶಿವಸೇನಾ ಮತ್ತೊಬ್ಬ ನಾಯಕ ಆದಿತ್ಯ ಠಾಕ್ರೆ ಹೇಳಿಕೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು