ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023 -24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಲಿದೆ.
ಈಗಾಗಲೇ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೆಳಿಗ್ಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟ ಮಾಡಿತ್ತು. ಇಂದು ಬೆಳಗ್ಗೆ 10.30 ರ ನಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in, https://kseeb.kar.nic.in ವೆಬ್ಸೈಟ್ ಗಳಲ್ಲಿ ವೀಕ್ಷಿಸಬಹುದು.
ಸುಮಾರು 4.41 ಲಕ್ಷ ವಿಧ್ಯಾರ್ಥಿಗಳು ಮತ್ತು 4.28 ಲಕ್ಷ ವಿಧ್ಯಾರ್ಥಿಗಳು, ಒಟ್ಟು 8.69 ಲಕ್ಷ ವಿಧ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು ಫಲಿತಾಂಶ ಇಂದು ಪ್ರಕಟವಾಗಲಿದೆ.