Wednesday, June 26, 2024

ಸತ್ಯ | ನ್ಯಾಯ |ಧರ್ಮ

ಅ.18 ಸುರತ್ಕಲ್ ಅಕ್ರಮ ಟೋಲ್ ತೆರವಿಗಾಗಿ ಟೋಲ್ ಗೇಟ್ ಮುತ್ತಿಗೆ: ಕುಂದಾಪುರದಲ್ಲಿ ಪೂರ್ವಭಾವಿ ಸಭೆ

ಕುಂದಾಪುರ:ಅ.06: ಅಕ್ಟೋಬರ್‌ 18ನೇ ತಾರೀಖಿನಂದು ಸಮಾನಮನಸ್ಕ ಸಂಘಟನೆಗಳ ವತಿಯಿಂದ ನಡೆಯಲಿರುವ ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆಯ ಪೂರ್ವಭಾವಿ ಸಭೆಯು ಮುನೀರ್‌ ಕಾಟಿಪಳ್ಳ ಇವರ ನೇತೃತ್ವದಲ್ಲಿ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಜರುಗಿತು.

ಈ ಕುರಿತು ಮಾತನಾಡಿದ ಮುನೀರ್‌ ಕಾಟಿಪಳ್ಳ ಅವರು ಹತ್ತು ಕಿ.ಮೀ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಹೆದ್ದಾರಿ ದರೋಡೆಗೆ ಸಮ. ಈ ರೀತಿ ಪ್ರಯಾಣಿಕರನ್ನು ಬಲವಂತವಾಗಿ ಸುಲಿಗೆ ಮಾಡುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅವರ ಆಕ್ರೋಶ ವ್ಯಕ್ತಪಡಿಸಿದರು.

ಚಿತ್ರ: ಸುರೇಶ ಕಲ್ಲಾಗರ


ಕುಂದಾಪುರ ಕಾಮಿ೯ಕ ಭವನದ ಸಬಾಂಗಣದಲ್ಲಿ ಜರುಗಿದ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಏಪ‌೯ಡಿಸಿದ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆರು ತಿಂಗಳ ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್, ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವಷ೯ಗಳನ್ನು ಅಕ್ರಮವಾಗಿ ಪೂರೈಸಿದೆ. ಈ ಅವಧಿಯಲ್ಲಿ ಸುರತ್ಕಲ್,ಬಿ.ಸಿ. ರೋಡ್ ಹೆದ್ದಾರಿಯಲ್ಲಿ ಸುಂಕ ಸಂಗ್ರಹದ ಹೆಸರನಲ್ಲಿ ವಾಹನ ಸವಾರರಿಂದ ವಸೂಲಿ ಮಾಡಿದ ಮೊತ್ತ ಸರಿ ಸುಮಾರು 400 ಕೋಟಿ ರೂಪಾಯಿ. ಇಷ್ಟಾದರೂ ಆಳುವವರ ಹಣದ ದಾಹ ತಣಿಯುತ್ತಿಲ್ಲ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದರು.

ಹೋರಾಟ‌‌ ಸಮಿತಿಯ ಮುಖಂಡ ಸಹಕಾರಿ ‌ದುರೀಣ ಕೊಳ್ಕೆಬೈಲ್ ಕಿಶನ್ ಹೆಗ್ಡೆ ಮಾತನಾಡಿ: ಟೋಲ್ ಗೇಟ್ ಮುತ್ತಿಗೆ ಹೋರಾಟಕ್ಕೆ ಬಸ್ಸ್ ಮಾಲಕರ ಸಂಘವು ಸಂಪೂಣ೯ ಬೆಂಬಲ ಕೊಡುತ್ತದೆ‌. ಉಡುಪಿ ಜಿಲ್ಲೆಯ ಬಡ ಮದ್ಯಮ ವರ್ಗದ ಹಾಗೂ ಟ್ಯಾಕ್ಸಿ ಚಾಲಕರನ್ನು ಟೋಲ್ ಗೇಟ್ ಹಿಂದಿರುವ ಶಕ್ತಿಗಳು ನಿರಂತರ ಶೋಷಿಸುತ್ತಿವೆ. ಈ ಶೋಷಣೆಯ ವಿರುದ್ಧದ ಹೋರಾಟದಲ್ಲಿ ನೂರಾರು ಮಂದಿ ಜಿಲ್ಲೆಯಿಂದ ಭಾಗವಹಿಸುವಂತೆ ಕರೆ ಅವರು ನೀಡಿದರು.

ಚಿತ್ರ: ಸುರೇಶ ಕಲ್ಲಾಗರ
ಸಿಐಟಿಯು ಜಿಲ್ಲಾ ಪ್ರಧಾನ ಕಾಯ೯ದಶಿ೯ ಸುರೇಶ ಕಲ್ಲಾಗರ, ಚಂದ್ರಶೇಖರ.ವಿ, ರಮೇಶ್ ವಿ, ರಾಜು ದೇವಾಡಿಗ ರವಿ.ವಿ.ಎಂ.‌, ದಲಿತ ಸಂಘಷ೯ ಸಮಿತಿ ಮುಖಂಡ ನಾಗರಾಜ, ಶ್ರೀನಿವಾಸ ಮಲ್ಯಾಡಿ, ಶ್ರೀನಾಥ ಕುಲಾಲ್, ಗಣೇಶ ಮೆಂಡನ್, ಬಾಲಕೃಷ್ಣ ಎಂ, ವೆಂಕಟೇಶ್ ಕೋಣಿ ಮತ್ತು ಇತರ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.
ಟೋಲ್ ಗೇಟ್ ಮುತ್ತಿಗೆ ನೇರ ಕಾಯಾ೯ಚರಣೆಯ ಅಂಗವಾಗಿ ಕುಂದಾಪುರ ಪೇಟೆಯಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಜಾಥಾ ನಡೆಸಲು ನಿಧ೯ರಿಸಲಾಯಿತು.

ಇಂಟಕ್ ಮುಖಂಡ ಲಕ್ಷ್ಮಣ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Related Articles

ಇತ್ತೀಚಿನ ಸುದ್ದಿಗಳು