Wednesday, May 28, 2025

ಸತ್ಯ | ನ್ಯಾಯ |ಧರ್ಮ

ಮತ್ತೆ ದಕ್ಷಿಣ ಕನ್ನಡ ಪ್ರಕ್ಷುಬ್ಧ ಸ್ಥಿತಿಯತ್ತ; ಶರಣ್ ಪಂಪ್ವೆಲ್ ಬಂಧನ

ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಕೊಲೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ, ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದ ವಿಹೆಚ್ ಪಿ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಶರಣ್ ಪಂಪ್ವೆಲ್ ಅವರನ್ನು ಬಂಧಿಸಿದ್ದಾರೆ. ಶರಣ್ ಪಂಪ್ವೆಲ್ ಅವರ ಬಂಧನ ತಿಳಿಯುತ್ತಿದ್ದಂತೆ ಮಂಗಳವಾರ ರಾತ್ರಿ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದುತ್ವ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದರು.

ಈ ನಡುವೆ ಪ್ರಚೋದನಕಾರಿ ಭಾಷಣ ಮಾಡುವ ಯಾರನ್ನೇ ಆಗಲಿ ಬಂಧಿಸಿ ಎಂದು ಮುಸ್ಲಿಂ ಮುಖಂಡರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಮೊನ್ನೆ ಶ್ರೀಕಾಂತ್ ಶೆಟ್ಟಿ ಎಂಬಾತ ರಕ್ತಕ್ಕೆ ರಕ್ತ ಅಂತ ಹೇಳಿದ್ದಾನೆ. ಮತ್ತೊಬ್ಬ ಭರತ್ ಕುಮ್ಡೇಲ್ ಎಂಬ ಗೂಂಡಾ, ಪೋಸ್ಟ್​ಮಾರ್ಟ್ಂ ಕೂಡ ಮಾಡಲು ಆಗದ ರೀತಿಯಲ್ಲಿ ಕೊಲೆ ಮಾಡುತ್ತೇನೆ ಎಂದಿದ್ದಾನೆ. ಸಾಮಾಜಿಕ ತಾಣಗಳಲ್ಲಿ ಬೆದರಿಕೆ ಹಾಕಿದವರ ವಿರುದ್ಧ 45 ಎಫ್‌ಐಆರ್​ ಆಗಿವೆ. ಆದರೆ ಒಬ್ಬಿಬ್ಬರನ್ನು ಬಿಟ್ಟು ಯಾರನ್ನೂ ಬಂಧನ ಮಾಡಲಿಲ್ಲ. ಎಲ್ಲರನ್ನು ಬಂಧಿಸಿ ಎಂದು ಎಸ್​ ​ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಒತ್ತಾಯಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page