Saturday, February 21, 2026

ಸತ್ಯ | ನ್ಯಾಯ |ಧರ್ಮ

ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ: ಮಗು ಸೇರಿ ನಾಲ್ವರು ದಾರುಣ ಸಾವು

ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಟ್ಟೆ ಕೆರೆ ಸಮೀಪ ಈ ಘಟನೆ ಸಂಭವಿಸಿದೆ. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಮಹಾರಾಷ್ಟ್ರ ಮೂಲದವರಾಗಿ ಗುರುತಿಸಲಾಗಿದೆ. ಮೃತರು 2 ವರ್ಷದ ಹಲಕಿ ಪಾಂಡೆ, ಮನೀಸ್ ಪಾಂಡೆ (23), ಲಕ್ಷ್ಮೀ ಚಿಮರಡಿ (27) ಮತ್ತು ರೇಖಾ ಭೋಕೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಒಬ್ಬ ಪುಟ್ಟ ಮಗು ಹಾಗೂ ಮೂವರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನೂ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page