Home ದೇಶ ರೈಲು ಅಪಘಾತಕ್ಕೆ ಮೋದಿ ಸರ್ಕಾರದ ವೈಫಲ್ಯ ಕಾರಣ: ಮಲ್ಲಿಕಾರ್ಜುನ ಖರ್ಗೆ

ರೈಲು ಅಪಘಾತಕ್ಕೆ ಮೋದಿ ಸರ್ಕಾರದ ವೈಫಲ್ಯ ಕಾರಣ: ಮಲ್ಲಿಕಾರ್ಜುನ ಖರ್ಗೆ

0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ಕಾಂಗ್ರೆಸ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಈ ಅಪಘಾತಕ್ಕೆ ಮೋದಿ ಸರ್ಕಾರದ ವೈಫಲ್ಯವೇ ಕಾರಣ ಎಂದು ಅದು ಆರೋಪಿಸಿದೆ.

ಬಿಜೆಪಿ ತನ್ನ ಹತ್ತು ವರ್ಷಗಳ ಆಡಳಿತದಲ್ಲಿ ರೈಲ್ವೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಪಕ್ಷ ಆರೋಪಿಸಿದೆ. “ಮೋದಿಯವರು ಹತ್ತು ವರ್ಷಗಳಿಂದ ರೈಲ್ವೆ ಸಚಿವಾಲಯವನ್ನು ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ. ಇದರಿಂದಾಗಿ ಇಲಾಖೆ ಪ್ರಚಾರ ವೇದಿಕೆಯಾಗಿ ಮಾರ್ಪಟ್ಟಿತು. ಇಂದಿನ ಅಪಘಾತ ವಾಸ್ತವದ ಪ್ರತಿಬಿಂಬವಾಗಿದೆ. ನಾವು ಸಂತ್ರಸ್ತರ ಪರವಾಗಿ ಹೋರಾಟ ಮಾಡುತ್ತೇವೆ. ಇದಕ್ಕೆ ಮೋದಿ ಸರಕಾರವನ್ನು ಹೊಣೆಗಾರರನ್ನಾಗಿ ಮಾಡುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸಂತ್ರಸ್ತರಿಗೆ ಕೇಂದ್ರ ಸರಕಾರ ಕೂಡಲೇ ಪರಿಹಾರ ನೀಡಬೇಕು” ಎಂದು ಅವರು ಒತ್ತಾಯಿಸಿದರು.

You cannot copy content of this page

Exit mobile version