ರಾಜ್ಯದಲ್ಲಿ ಮತ್ತೆ ಐಪಿಎಸ್, ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಆದೇಶ ಪತ್ರದಲ್ಲಿ ಏನಿದೆ ಗೊತ್ತೇ?

ವಿಜಯನಗರ: ವಿಜಯನಗರ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ. ಅವರನ್ನು ರಾಜ್ಯ ಸರ್ಕಾರ ಶುಕ್ರವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಲೋಕಾಯುಕ್ತದಲ್ಲಿ ಎಸ್‌ ಪಿ ಯಾಗಿದ್ದ ಶ್ರೀಹರಿ ಬಾಬು ಬಿ.ಎಲ್ ಅವರನ್ನು ವಿಜಯನಗರ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಇದಲ್ಲದೆ ವಿಜಯನಗರದ ಜಿಲ್ಲಾಧಿಕಾರಿಯಾಗಿದ್ದ ಅನಿರುದ್ಧ್‌ ಶ್ರವಣ್‌ ಪಿ. ಅವರನ್ನು ಕೂಡ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇವರ ಸ್ಥಾನಕ್ಕೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಟಿ. ವೆಂಕಟೇಶ್‌ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಮಾಡಿ, ತಕ್ಷಣವೆ ಜಾರಿ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು