Monday, January 12, 2026

ಸತ್ಯ | ನ್ಯಾಯ |ಧರ್ಮ

ಆಂಧ್ರದಲ್ಲಿದೆಯಂತೆ ತುಂಗಭದ್ರಾ ಯೋಜನೆ! : ಪಠ್ಯಪುಸ್ತಕದಲ್ಲಿನ ತಪ್ಪು ಮಾಹಿತಿಗೆ ಮೋಹನ್‌ ದಾಸರಿ ಖಂಡನೆ

ಬೆಂಗಳೂರು: ಅತಿದೊಡ್ಡ ಅಣೆಕಟ್ಟೆಗಳಲ್ಲಿ ಒಂದಾದ ತುಂಗಭದ್ರಾ ನೀರಾವರಿ ಯೋಜನೆಯು ಆಂಧ್ರಪ್ರದೇಶದಲ್ಲಿದೆ ಎಂದು ಸಿಬಿಎಸ್‌ಇ ಪಠ್ಯಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ʼನನ್ನ ಮಗನ ಪಠ್ಯಪುಸ್ತಕದ ನೀರಿನ ಸಂಪನ್ಮೂಲಗಳು ಪಾಠದಲ್ಲಿ ತುಂಗಭದ್ರ ಯೋಜನೆಯು ಆಂಧ್ರ ಪ್ರದೇಶದಲ್ಲಿದೆ ಎಂದು ಹೇಳಲಾಗಿದೆ. ಇಂದೆಂತಹಾ ನಾಚಿಕೆಯ ವಿಷಯ ಸಿಎಂ ಬಸವರಾಜ ಬೊಮ್ಮಾಯಿಯವರೇ? ನಿಮ್ಮ ಶಿಗ್ಗಾವಿ ಕ್ಷೇತ್ರದಲ್ಲೂ ಹರಿಯುವ ತುಂಗಭದ್ರಾ ನದಿಗೆ ಸಂಬಂಧಿಸಿದ ಯೋಜನೆ ಬಗ್ಗೆಯೇ ತಪ್ಪು ಮಾಹಿತಿ ನೀಡಲಾಗಿದೆʼ ಎಂದು ಮುಖ್ಯಮಂತ್ರಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ʼಸಿಬಿಎಸ್‌ಇ ನಾಲ್ಕನೇ ತರಗತಿ ಪಠ್ಯಪುಸ್ತಕದಲ್ಲಿ ದೇಶದ ಪ್ರಮುಖ ವಿವಿಧೋದ್ದೇಶ ನದಿ ಯೋಜನೆಗಳ ಪಟ್ಟಿಯನ್ನು ನೀಡಲಾಗಿದೆ. ಅದರಲ್ಲಿ ತುಂಗಭದ್ರಾ ನೀರಾವರಿ ಯೋಜನೆಯು ಆಂಧ್ರ ಪ್ರದೇಶದಲ್ಲಿದೆ ಎಂದು ತಪ್ಪು ಮಾಹಿತಿ ನೀಡಲಾಗಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿರುವ, ಬರೋಬ್ಬರಿ 135 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಅಣೆಕಟ್ಟು ಅಥವಾ ಪಂಪ ಸಾಗರವನ್ನು ಆಂಧ್ರ ಪ್ರದೇಶದಲ್ಲಿರುವ ಯೋಜನೆ ಎಂದು ಮಕ್ಕಳಿಗೆ ಕಲಿಸುವುದು ಎಷ್ಟು ಸರಿ?ʼ ಎಂದು ಮೋಹನ್‌ ದಾಸರಿ ಪ್ರಶ್ನಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page