ನಿನ್ನೆ ಎರಡು ಸ್ಥಳಗಳಲ್ಲಿ ನಡೆದ ವಾಹನ ಅಪಘಾತಗಳಲ್ಲಿ ಒಟ್ಟು 14 ಮಂದಿ ಬಲಿಯಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ರೂಪೇಶ್ ಕುಮಾರ್ ದ್ವಿವೇದಿ ಪ್ರಕಾರ, ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಘಾಟಾಬಿಲ್ಲೋಡ್ ಬಳಿ ಜೀಪ್ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಎಂಟು ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಅಪಘಾತದ ನಂತರ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದಾನೆ ಎಂದು ದ್ವಿವೇದಿ ಹೇಳಿದ್ದಾರೆ.
ಇನ್ನೊಂದು ಘಟನೆಯಲ್ಲಿ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಚಂಪುವಾ ಪ್ರದೇಶದಲ್ಲಿ ಬುಧವಾರ ಸಂಜೆ ಎರಡು ಟ್ರಕ್‌ಗಳು ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಿಮುಲಿ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-520ರಲ್ಲಿ ಈ ಘಟನೆ ನಡೆದಿದೆ.
ಕಾರಿನಲ್ಲಿದ್ದ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರು ಕುಟುಂಬ ಸದಸ್ಯರು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.