Monday, October 20, 2025

ಸತ್ಯ | ನ್ಯಾಯ |ಧರ್ಮ

ಫೈರಿಂಗ್ ಅಭ್ಯಾಸ ನಡೆಸುತ್ತಿದ್ದ ವೇಳೆ ಗುರಿ ತಪ್ಪಿದ ಬುಲೆಟ್: ಇಬ್ಬರು ಅಗ್ನಿವೀರರ ಸಾವು

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಇಬ್ಬರು ಅಗ್ನಿವೀರರು ಪ್ರಾಣ ಕಳೆದುಕೊಂಡಿದ್ದಾರೆ. ತರಬೇತಿ ಸಮಯದಲ್ಲಿ ಫೈರಿಂಗ್ (ಫೈರಿಂಗ್ ಪ್ರಾಕ್ಟೀಸ್) ಮಾಡುವಾಗ ಗುಂಡುಗಳು ಗುರಿ ತಪ್ಪಿ ಈ ದುರಂತ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಅಗ್ನಿವೀರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ನಾಸಿಕ್ ಜಿಲ್ಲೆಯ ಆರ್ಟಿಲರಿ ಕೇಂದ್ರದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೈರಿಂಗ್ ಅಭ್ಯಾಸದ ವೇಳೆ ಗುರಿ ತಪ್ಪಿದ ಗುಂಡುಗಳು ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಅವರ ದೇಹಕ್ಕೆ ತಗುಲಿದವು ಎಂದು ಹೇಳಲಾಗಿದೆ. ಕೂಡಲೇ ಅವರನ್ನು ಡಿಯೋಲಾಲಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಗ್ನಿವೀರ್ ತಂಡ ತಿಳಿಸಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಇಬ್ಬರೂ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ದೇವಳಲಿ ಕ್ಯಾಂಪ್ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page