ಚಂಡೀಗಢ: ದೆಹಲಿಯಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯಲ್ಲಿರುವ ಪಾಕಿಸ್ತಾನಿ ಅಧಿಕಾರಿಗೆ ಭಾರತೀಯ ಸೇನೆಯ ಬಗ್ಗೆ ಮಾಹಿತಿಯನ್ನು ರವಾನಿಸುವ ಮೂಲಕ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರನ್ನು ಬಂಧಿಸಿರುವುದಾಗಿ ಪಂಜಾಬ್ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಪಾಕಿಸ್ತಾನದಲ್ಲಿರುವ ಹ್ಯಾಂಡ್ಲರ್‌ಗೆ ಶಂಕಿತನೊಬ್ಬ ಮಾಹಿತಿ ರವಾನಿಸುತ್ತಿದ್ದನೆಂದು ಪತ್ತೆಯಾದ ನಂತರ ಆತನನ್ನು ಬಂಧಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಆತನನ್ನು ವಿಚಾರಣೆಗೆ ಒಳಪಡಿಸಿದ ನಂತರ ಮತ್ತೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಮಾಹಿತಿ ನೀಡಿದ್ದಕ್ಕಾಗಿ ಆರೋಪಿಗಳು ಆನ್‌ಲೈನ್‌ನಲ್ಲಿ ಹಣ ಪಡೆದಿದ್ದಾರೆ ಎಂದು ಡಿಜಿಪಿ ಹೇಳಿದರು. ಆರೋಪಿಗಳಿಂದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.