ಬೆಂಗಳೂರು: ನಟಿ ರಮ್ಯಾ (Actress Ramya) ವಿರುದ್ಧ ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ, ಈ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಒಟ್ಟು 9ಕ್ಕೆ ಏರಿಕೆಯಾಗಿದೆ.
ಬಂಧಿತ ಆರೋಪಿಗಳನ್ನು ಉಡುಪಿ ಮೂಲದ ಸುಜನ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಕೂಡ ನಟ ದರ್ಶನ್ ಅವರ ಅಭಿಮಾನಿಗಳಾಗಿದ್ದು, ರಮ್ಯಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು.
ಈ ಮೊದಲು, ಇದೇ ಪ್ರಕರಣದಲ್ಲಿ ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಿಂದ 7 ಜನರನ್ನು ಬಂಧಿಸಲಾಗಿತ್ತು.
ಸದ್ಯದಲ್ಲಿ, ನಟಿ ರಮ್ಯಾ ಅವರು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಇದು ನಟ ದರ್ಶನ್ ಅವರ ಕೆಲವು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ಇದರ ಹಿನ್ನೆಲೆಯಲ್ಲಿ, ಕೆಲ ಅಭಿಮಾನಿಗಳು ರಮ್ಯಾ ಅವರಿಗೆ ಅಶ್ಲೀಲ ಸಂದೇಶಗಳು ಮತ್ತು ಕಾಮೆಂಟ್‌ಗಳನ್ನು ಕಳುಹಿಸಿದ್ದರು. ಈ ಬಗ್ಗೆ ರಮ್ಯಾ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು.