ಅರೇಹಳ್ಳಿ : 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರೋಟರಿ ಶಾಲೆ ಅರೇಹಳ್ಳಿಯ ಇಬ್ಬರು ವಿದ್ಯಾರ್ಥಿಗಳು 625 ಕ್ಕೆ 608 ಅಂಕಗಳನ್ನು ಗಳಿಸುವ ಮೂಲಕ ಹೋಬಳಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಬೇಲೂರು ತಾಲೂಕಿನ ಅರೇಹಳ್ಳಿ ಪಟ್ಟಣದ ರೋಟರಿ ಶಾಲೆಯ ಇಂಚರ ಜೆ.ಸಿ ಮತ್ತು ನೇಹಾ ಪ್ರಜಾಪತ್ 625ಕ್ಕೆ 608 ಅಂಕಗಳನ್ನು ಗಳಿಸುವ ಮೂಲಕ ಹೋಬಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿ ದ್ದಾರೆ. ಈ ಸಾಲಿನಲ್ಲಿ ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಅವರಲ್ಲಿ 17 ಡಿಸ್ಟಿಂಕ್ಷನ್ ಹಾಗೂ 12 ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಈ ಸಾಧನೆಯ ಮೂಲಕ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.