Friday, March 13, 2026

ಸತ್ಯ | ನ್ಯಾಯ |ಧರ್ಮ

ಜಾರ್ಖಂಡ್‌: ಮಾವೋವಾದಿಗಳ ದಾಳಿಗೆ ಇಬ್ಬರು ಯೋಧರು ಹುತಾತ್ಮ

ರಾಂಚಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭಾಮ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸ್‌ನ ಜಾರ್ಖಂಡ್ ಜಾಗ್ವಾರ್ ಫೋರ್ಸ್‌ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟೊಂಟೊ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಾವೋವಾದಿಗಳ ಹೊಂಚುದಾಳಿಯಲ್ಲಿ ಇಬ್ಬರು ಯೋಧರಾದ ಅಮಿತ್ ತಿವಾರಿ ಮತ್ತು ಗೌತಮ್ ಕುಮಾರ್ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಸಿಂಗ್‌ಭಾಮ್ ಎಸ್‌ಪಿ ಅಶುತೋಷ್ ಶೇಖರ್ ಹೇಳಿದ್ದಾರೆ. ಘಟನೆಯ ಸಂಪೂರ್ಣ ಮಾಹಿತಿ ಹೊರಬೀಳಬೇಕಿದೆ ಎಂದರು. ಕೆಲವು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದರು. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page