Sunday, July 27, 2025

ಸತ್ಯ | ನ್ಯಾಯ |ಧರ್ಮ

‘ಪೋಕ್ಸೊ’ ಅಡಿಯಲ್ಲಿ ಮುರುಘಾ ಶರಣರ ವಿರುದ್ಧ ಮತ್ತೆ ಎರಡು ಪ್ರಕರಣ ದಾಖಲು

ಪೋಕ್ಸೊ ಪ್ರಕರಣದ ಅಡಿಯಲ್ಲಿ ಮುರುಘಾ ಮಠದ ಶಿವಮೂರ್ತಿಗಳ ಮೇಲೆ ಮತ್ತೆ ಎರಡು ಹೊಸ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಹೆಣ್ಣು ಮಕ್ಕಳ ಹೇಳಿಕೆ ಮತ್ತು ಪೂರಕ ಸಾಕ್ಷಾಧಾರಗಳ ಕಲೆ ಹಾಕಿದ ನಂತರ ಎಫ್ಐಆರ್ ಪ್ರಕ್ರಿಯೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುರುಘಾ ಮಠದ ವ್ಯಾಪ್ತಿಯಲ್ಲಿ ಬರುವ ಅಕ್ಕಮಹಾದೇವಿ ವಿದ್ಯಾರ್ಥಿನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 12 ಮತ್ತು 14 ವರ್ಷದ ಹೆಣ್ಣು ಮಕ್ಕಳಿಬ್ಬರೂ ತಮ್ಮ ಪೋಷಕರೊಂದಿಗೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹೋಗಿ ದೂರು ದಾಖಲಿಸಿದ್ದಾರೆ. ಮುರುಘಾ ಶರಣರ ಹಿಂದಿನ ಪ್ರಕರಣಗಳ ಬಗ್ಗೆ ಸಂಪೂರ್ಣ ಜವಾಬ್ದಾರಿ ತಗೆದುಕೊಂಡಿದ್ದ ಒಡನಾಡಿ ಸಂಸ್ಥೆಯ ಸ್ಟಾನ್ಲಿ ಅವರನ್ನು ಸಂಪರ್ಕಿಸಿದ ನಂತರ ಅವರ ಸಲಹೆಯ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಲಾಗಿದೆ.

ಸಧ್ಯ ಶಿವಮೂರ್ತಿಗಳು ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಗೆ ಕೋರಿ 3 ಬಾರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಈಗ ಮತ್ತೂ ಎರಡು ಪ್ರಕರಣ ಪೋಕ್ಸೊ ಕಾಯ್ದೆ ಅಡಿಯಲ್ಲಿ ದಾಖಲಾಗುತ್ತಿದ್ದು, ಶಿವಮೂರ್ತಿಗಳಿಗೆ ಸಧ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ ಎಂದೇ ಅಂದಾಜಿಸಲಾಗಿದೆ‌. ಈ ಬಗ್ಗೆ ದಿ ಫೈಲ್’ ವರದಿ ಮಾಡಿದೆ. ಮುಂದಿನ ಬೆಳವಣಿಗೆ ಬಗ್ಗೆ ನಿರೀಕ್ಷಿಸಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page