Friday, May 30, 2025

ಸತ್ಯ | ನ್ಯಾಯ |ಧರ್ಮ

ಹಾಸನದ ಇಬ್ಬರಲ್ಲಿ ಕರೊನಾ ಸೋಂಕು ದೃಢ

ಹಾಸನ :  ಜಿಲ್ಲೆಯಲ್ಲಿ ಎರಡು ಹೊಸ ಕರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.‌ ಓರ್ವ ಮೆಡಿಕಲ್ ವಿದ್ಯಾರ್ಥಿ ಮತ್ತು 45 ವರ್ಷದ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇಬ್ಬರಲ್ಲಿಯೂ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಗರ್ಭಕೋಶ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಇನ್ನೊಂದೆಡೆ, ಬೆಂಗಳೂರಿಗೆ ತೆರಳಿ ವಾಪಸ್ ಬಂದಿದ್ದ ಮೆಡಿಕಲ್ ವಿದ್ಯಾರ್ಥಿಯೊಬ್ಬರಿಗೂ ಸೋಂಕು ದೃಢಪಟ್ಟಿದೆ. ಈ ವಿದ್ಯಾರ್ಥಿಗೆ ಟ್ರಾವೆಲ್ ಹಿಸ್ಟರಿ ಇದೆ ಎಂದು ತಿಳಿದುಬಂದಿದೆ.ಪಾಸಿಟಿವ್ ವರದಿಯಾದ ಇಬ್ಬರಿಗೂ ಉಸಿರಾಟದ ತೊಂದರೆ ಅಥವಾ ಇತರ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ಇಬ್ಬರಿಗೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಚೆಗೆ ಅನಾರೋಗ್ಯದಿಂದ ಮೃತಪಟ್ಟ ವೃದ್ಧರೊಬ್ಬರ ಕರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದನ್ನು ಸ್ಮರಿಸಬಹುದು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page