Tuesday, February 17, 2026

ಸತ್ಯ | ನ್ಯಾಯ |ಧರ್ಮ

ಬೈಕುಗಳ ಮುಖಾಮುಖಿ ಡಿಕ್ಕಿ ಇಬ್ಬರು ಯುವಕರು ಸಾ*ವು

ಹಾಸನ : ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದೊಡ್ಢರಿ ಕಾವಲು ಗೇಟ್ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಧಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಮೇಶ್ (23), ಪುರುಷೋತ್ತಮ್ (26) ಮೃತ ದುರ್ದೈವಿಗಳು.

ರಮೇಶ್ ಹಾಗೂ ಕಿರಣ್ ಸ್ಕೂಟಿಯಲ್ಲಿ ಬರುತ್ತಿದ್ದ ವೇಳೆ, ಎದುರು ದಿಕ್ಕಿನಿಂದ ವೇಗವಾಗಿ ಬಂದ ಪುರುಷೋತ್ತಮ್ ಚಾಲಿತ ಬೈಕ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ತೀವ್ರತೆಯಿಂದ ರಮೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಲ್ಯದಲ್ಲೇ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ ರಮೇಶ್, ಹೆಲ್ಮೆಟ್ ಧರಿಸಿಕೊಂಡಿದ್ದರೂ ಡಿಕ್ಕಿಯ ರಭಸಕ್ಕೆ ಬೈಕ್ ಹ್ಯಾಂಡಲ್ ಎದೆಗೆ ಒತ್ತಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೈಕ್ ಸವಾರ ಪುರುಷೋತ್ತಮ್ ಕೂಡ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿ ಇದ್ದ ಕಿರಣ್ ಗಂಭೀರ ಗಾಯಗಳೊಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಸಾವೆ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page