ಹಾಸನ ಟ್ಯಾಂಕರ್ ಬೈಕ್ ಮುಖಾಮುಖಿ ಡಿಕ್ಕಿ ಇಬ್ಬರು ಯುವಕರು – ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕ್‌ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲ್ಲೂಕಿನ ಮುದ್ಲಾಪುರ ಗ್ರಾಮದ ಬಳಿ ನಡೆದಿದೆ.ಮೃತರನ್ನು ಯಲಗುಂದ ಗ್ರಾಮದ ಸಚಿನ್ (26) ಹಾಗೂ ವಿಜಯ್‌ಕುಮಾರ್ (38) ಎಂದು ಗುರುತಿಸಲಾಗಿದೆ. ಇಬ್ಬರೂ ಬೈಕ್‌ನಲ್ಲಿ ಹಾಸನದಿಂದ ಯಲಗುಂದ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ, ಎದುರಿನಿಂದ ಹಾಸನದತ್ತ ಬರುತ್ತಿದ್ದ ಗ್ಯಾಸ್ ಟ್ಯಾಂಕರ್‌ಗೆ ಬೈಕ್‌ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಗ್ಯಾಸ್ ಟ್ಯಾಂಕರ್ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪೆಟ್ರೋಲ್ ಬಂಕ್‌ವೊಂದರ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಿದ ಹಾಸನ ಗ್ರಾಮಾಂತರ ಪೊಲೀಸರು, ಪರಾರಿಯಾಗಿದ್ದ ಟ್ಯಾಂಕರ್ ಚಾಲಕನನ್ನು ಬಂಧಿಸಿದ್ದಾರೆ.

ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ

Related Articles

ಇತ್ತೀಚಿನ ಸುದ್ದಿಗಳು