Saturday, April 19, 2025

ಸತ್ಯ | ನ್ಯಾಯ |ಧರ್ಮ

ಕೇರಳ: ಯುಡಿಎಫ್ 15 ಸ್ಥಾನಗಳಲ್ಲಿ ಮತ್ತು ಎಲ್ ಡಿಎಫ್ 5 ಸ್ಥಾನಗಳಲ್ಲಿ ಮುನ್ನಡೆ. ಮತ್ತೆ ಸೊನ್ನೆ ಸುತ್ತಿದ ಬಿಜೆಪಿ

ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮಿಂಚುತ್ತಿದೆ. ಕೇರಳದಲ್ಲಿ 20 ಲೋಕಸಭಾ ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದ್ದು, ಯುಡಿಎಫ್ 15 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಹಿಂದೆ ಬಿದ್ದಿದೆ. ಅದು ಕೇವಲ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕ್ರೈಸ್ತ ಅಲ್ಪಸಂಖ್ಯಾತರಿರುವ ಇಡುಕ್ಕಿಯಲ್ಲಿ ಕಾಂಗ್ರೆಸ್ ಹಾಲಿ ಸಂಸದ ಡೀನ್ ಕುರಿಯಾಕೋಸ್ 3 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ಪೊನ್ನಾನಿಯಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಇಟಿ ಮೊಹಮ್ಮದ್ ಬಶೀರ್ 1000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕೊಲ್ಲಂನಲ್ಲಿ ಕಾಂಗ್ರೆಸ್ ಮಿತ್ರಪಕ್ಷ ಆರ್‌ಎಸ್‌ಪಿಯ ಹಾಲಿ ಸಂಸದ ಎನ್‌ಕೆ ಪ್ರೇಮಚಂದ್ರನ್ 3,800 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page