Tuesday, June 18, 2024

ಸತ್ಯ | ನ್ಯಾಯ |ಧರ್ಮ

ಉಡುಪಿ | ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲು

ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಹಿಂಪ ಮುಖಂಡರಾದ ಶರಣ್ ಪಂಪ್ ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, “ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡುತ್ತೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು. ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ಸಿದ್ಧರಾಗಬೇಕು, ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕು ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದರು.”

ಹಾಗೆಯೇ ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಕೂಡಾ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಹಾಗೆಯೇ ಉಡುಪಿ ಬಿಜೆಪಿಯ ವಿಭಾಗದ ಅಧ್ಯಕ್ಷೆ ವೀಣಾ ಶೆಟ್ಟಿಯವರ ವಿರುದ್ಧವೂ ಕೇಸು ದಾಖಲಿಸಲಾಗಿದೆ.

ಅವರು ಜುಲೈ 28ರಂದು ನಡೆದ ಪ್ರತಿಭಟನಾ ಸಭೆಯಲ್ಲಿ “ಮುಸ್ಲಿಂ ಹುಡುಗಿಯರನ್ನು ಕಾಲೇಜುಗಳಿಗೆ ಸೇರಿಸಿಕೊಳ್ಳಬೇಡಿ, ಅವರು ಮದ್ರಸಾ ಸೇರಿಕೊಳ್ಳಲಿ” ಎಂದು ಹೇಳಿದ್ದರೆಂದು ವರದಿಯಾಗಿತ್ತು. ಪ್ರಸ್ತುತ ಪೊಲೀಸರು ಅವರ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು