Friday, June 14, 2024

ಸತ್ಯ | ನ್ಯಾಯ |ಧರ್ಮ

ನೇಜಾರು ಕುಟುಂಬ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಡಿಸೆಂಬರ್ 5ರವರೆಗೆ ನ್ಯಾಯಾಂಗ ಬಂಧನಕ್ಕೆ

ಉಡುಪಿ: ನೇಜಾರು ಕುಟುಂಬದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಉಡುಪಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ನವೆಂಬರ್ 22ರಂದು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಉಡುಪಿ ಮತ್ತು ಬೆಳಗಾವಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನೇಜಾರು ಕುಟುಂಬದ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿಯಲ್ಲಿ ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿ ಪ್ರವೀಣ್‌ನನ್ನು ಉಡುಪಿ ಪೊಲೀಸರು ನವೆಂಬರ್ 15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ನ್ಯಾಯಾಲಯವು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಪ್ರವೀಣನನ್ನು ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಸ್ಥಳ, ತನಿಖೆ, ಸಾಕ್ಷಿಗಳು, ಹೇಳಿಕೆ, ಆರೋಪಿಗಳ ಗುರುತು ಸೇರಿದಂತೆ ಎಲ್ಲ ತನಿಖಾ ಪ್ರಕ್ರಿಯೆಗಳನ್ನು ವಾರದೊಳಗೆ ಪೂರ್ಣಗೊಳಿಸಿದ್ದಾರೆ. ನವೆಂಬರ್ 22ರಂದು ಪ್ರವೀಣ್ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನ್ಯಾಯಾಧೀಶೆ ದೀಪಾ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಲು ಆದೇಶಿಸಿದರು. ಡಿ.5ರಂದು ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನ್ಯಾಯಾಧೀಶರು ಆದೇಶಿಸಿದರು.ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಕೂಡ ಹಾಜರಿದ್ದರು.

ಬಳಿಕ ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಹಿರಿಯಡ್ಕದ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

Related Articles

ಇತ್ತೀಚಿನ ಸುದ್ದಿಗಳು