ಉಡುಪಿ: ಆರೋಪಿಯನ್ನು ಸ್ಥಳ ಪರಿಶೀಲನೆಗೆ ಕರೆತಂದಿದ್ದ ವೇಳೆ ನೇಜಾರು ಹತ್ಯೆ ಪ್ರಕರಣದ ಆರೋಪಿಯ ಮೇಲೆ ಸಾರ್ವಜನಿಕರು ಹಲ್ಲೆಗೆ ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಪ್ರಕರಣದ ತನಿಖೆ ನಡೆಸುತ್ತಿರುವ ಉಡುಪಿ ಪೊಲೀಸರು ಕೊಲೆ ಆರೋಪಿ ಪ್ರವೀಣ್ ಅರುಣ್ ಚೌಗಲೆ (39) ಯನ್ನು ಇಂದು (ನ.16) ವಿಚಾರಣೆಗೆ ಕರೆದೊಯ್ದಿದ್ದು, ಈ ವೇಳೆ ಕೋಪಗೊಂಡ ಗುಂಪು ಚೌಗುಲೆ ಮೇಲೆ ಹಲ್ಲೆಗೆ ಯತ್ನಿಸಿದೆ ಎನ್ನಲಾಗಿದೆ.
ವಿಚಾರಣೆ ವೇಳೆ ಜಮಾಯಿಸಿದ ಜನರು ಆರೋಪಿಗೆ ಬದುಕುವ ಹಕ್ಕಿಲ್ಲ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಒತ್ತಾಯಿಸಿದರು.
ವಿಚಾರಣೆ ಪೂರ್ಣಗೊಂಡ ನಂತರ ಆಕ್ರೋಶಿತ ಗುಂಪು ಆರೋಪಿಯ ಮೇಲೆ ಹಲ್ಲೆಗೆ ಯತ್ನಿಸಿತು. ಇದಕ್ಕೆ ಪ್ರತಿಯಾಗಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು. ಈ ನಡುವೆ ಲಾಠಿ ಚಾರ್ಜ್ ಖಂಡಿಸಿ ಅಲ್ಲಿ ನೆರೆದಿದ್ದ ಜನರು ಧರಣಿ ನಡೆಸಿದರು.