Monday, June 17, 2024

ಸತ್ಯ | ನ್ಯಾಯ |ಧರ್ಮ

ಮಹಿಷ ದಸರಾ: ಉಡುಪಿಯಲ್ಲಿ ಮೆರವಣಿಗೆ ನಿಷೇಧಿಸಿ ಆಜ್ಞೆ ಹೊರಡಿಸಿದ ಜಿಲ್ಲಾಧಿಕಾರಿ

ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರು ಶನಿವಾರ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಸಂಜೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ‘ಮಹಿಷ ದಸರಾ’ದ ಪರವಾಗಿ ಹಾಗೂ ವಿರುದ್ಧವಾಗಿ ಮೆರವಣಿಗೆ, ಭಾಷಣ ಹಾಗೂ ಬ್ಯಾನರ್, ಬಂಟಿಂಗ್ಸ್ ಬಳಕೆಯನ್ನು ನಿಷೇಧಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯಿದೆಯ ಸೆಕ್ಷನ್ 35ರ ಅಡಿಯಲ್ಲಿ ಶುಕ್ರವಾರ ಅವರು ಅಂಗೀಕರಿಸಿದ ಆದೇಶದಲ್ಲಿ, ಉಡುಪಿ ಜಿಲ್ಲೆಯಾದ್ಯಂತ ದಸರಾ ಉತ್ಸವದ ಸಂದರ್ಭದಲ್ಲಿ ಸಮಸ್ಯೆಗಳು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಟ್ರಾಫಿಕ್ ಸಂದಣಿ ತಡೆಯಲು ಎರಡು ದಿನಗಳ ಕಾಲ ಮಹಿಷ ದಸರಾ ಪರ ಮತ್ತು ವಿರುದ್ಧ ಚಟುವಟಿಕೆಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮಹಿಷ ದಸರಾ ಪರ ಮತ್ತು ವಿರುದ್ಧ ಘೋಷಣೆಗಳನ್ನು ಕೂಗುವುದು, ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಮತ್ತು ಪ್ರಚೋದನಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜನರಿಗೆ ಹಾನಿ ಮಾಡುವ ಆಯುಧಗಳನ್ನು ಕೊಂಡೊಯ್ಯಲು ಯಾವುದೇ ವ್ಯಕ್ತಿಗೆ ಅನುಮತಿಯಿರುವುದಿಲ್ಲ. ಈ ದಿನಗಳಲ್ಲಿ ಪಟಾಕಿಗಳನ್ನು ಸಿಡಿಸುವುದು ಮತ್ತು ಸ್ಫೋಟಕ ವಸ್ತುಗಳನ್ನು ಸಾಗಿಸುವುದನ್ನು ಸಹ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು