Home ರಾಜ್ಯ ಉಡುಪಿ ಉಡುಪಿಯಲ್ಲಿ ಮುಂದಿನ 7 ದಿನ ಭಾರಿ ಮಳೆ, ಆರೆಂಜ್ ಅಲರ್ಟ್ ಜಾರಿ: ಸಮುದ್ರ, ನದಿ ತೀರಕ್ಕೆ...

ಉಡುಪಿಯಲ್ಲಿ ಮುಂದಿನ 7 ದಿನ ಭಾರಿ ಮಳೆ, ಆರೆಂಜ್ ಅಲರ್ಟ್ ಜಾರಿ: ಸಮುದ್ರ, ನದಿ ತೀರಕ್ಕೆ ಇಳಿಯದಂತೆ ಜಿಲ್ಲಾಡಳಿತದ ಕಟ್ಟೆಚ್ಚರ!

0

ಉಡುಪಿ: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ (ಜೂನ್ 5 ರಿಂದ ಜೂನ್ 11 ರವರೆಗೆ) ‘ಆರೆಂಜ್ ಅಲರ್ಟ್’ (Orange Alert) ಘೋಷಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಭಾರಿ ಗಾಳಿ-ಸಹಿತ ಮುಂಗಾರು ಮಳೆಯಾಗುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮುಂಜಾಗ್ರತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸಾರ್ವಜನಿಕರು ಮತ್ತು ರೈತರಿಗೆ ಸೂಚನೆಗಳು:

  • ಹೊರಗೆ ತಿರುಗಾಡಬೇಡಿ: ಮಳೆ, ಗಾಳಿ ಹಾಗೂ ಸಿಡಿಲು ಬರುವ ಸಂದರ್ಭದಲ್ಲಿ ಸಾರ್ವಜನಿಕರು, ಮಕ್ಕಳು ಮತ್ತು ಕಾರ್ಮಿಕರು ಹೊರಗಡೆ ತಿರುಗಾಡದೆ ಕಡ್ಡಾಯವಾಗಿ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ರೈತರು ಇಂತಹ ಸಮಯದಲ್ಲಿ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು.
  • ನದಿ, ಸಮುದ್ರಕ್ಕೆ ಇಳಿಯಬೇಡಿ: ಪ್ರವಾಸಿಗರು, ಸಾರ್ವಜನಿಕರು ಹಾಗೂ ಮೀನುಗಾರರು ಯಾವುದೇ ಕಾರಣಕ್ಕೂ ನದಿ, ನೀರಿರುವ ಜಲಮೂಲಗಳು ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
  • ವಿದ್ಯುತ್ ಕಂಬಗಳಿಂದ ದೂರವಿರಿ: ಸಾರ್ವಜನಿಕರು ಅಪಾಯಕಾರಿ ಮರಗಳು, ಹಳೆಯ ಕಟ್ಟಡಗಳು ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು. ರಸ್ತೆಯಲ್ಲಿ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಗಳಿಂದ ದೂರವಿರಬೇಕು. ಮನೆಗಳ ಮೇಲೆ ಅಪಾಯಕಾರಿಯಾಗಿ ಬೆಳೆದಿರುವ ಮರದ ರೆಂಬೆ-ಕೊಂಬೆಗಳನ್ನು ಮೊದಲೇ ಕತ್ತರಿಸಿ ಸುರಕ್ಷತೆ ವಹಿಸಬೇಕು.

ಭೂಕುಸಿತದ ಆತಂಕ – ಕಾಳಜಿ ಕೇಂದ್ರಗಳ ಸ್ಥಾಪನೆ: ಜಿಲ್ಲೆಯಲ್ಲಿ ಸತತವಾಗಿ ಭಾರಿ ಮಳೆಯಾಗುತ್ತಿರುವುದರಿಂದ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಭೂಕುಸಿತ (Landslide) ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಅಪಾಯಕಾರಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ತಕ್ಷಣವೇ ಸ್ಥಳೀಯ ತಹಶೀಲ್ದಾರ್ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಸಂಪರ್ಕಿಸಿ, ಮುಂಜಾಗ್ರತಾ ಕ್ರಮವಾಗಿ ಹತ್ತಿರದ ಸರ್ಕಾರಿ ಕಾಳಜಿ ಕೇಂದ್ರಗಳಿಗೆ (Relief Centres) ತೆರಳಿ ಆಶ್ರಯ ಪಡೆಯಲು ಕೋರಲಾಗಿದೆ. ಹಳೆಯ ಅಥವಾ ದುರ್ಬಲ ಕಟ್ಟಡಗಳಲ್ಲಿ ವಾಸಿಸುವವರೂ ಸಹ ಕಾಳಜಿ ಕೇಂದ್ರಗಳ ನೆರವು ಪಡೆಯಬಹುದು.

ಅಧಿಕಾರಿಗಳು ಕೇಂದ್ರಸ್ಥಾನದಲ್ಲರಲು ಆದೇಶ: ಯಾವುದೇ ರೀತಿಯ ವಿಪತ್ತನ್ನು ತಕ್ಷಣವೇ ಎದುರಿಸಲು ಸಜ್ಜಾಗುವಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲೇ (Headquarters) ಇರಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.

ತುರ್ತು ಸಹಾಯವಾಣಿ ಸಂಖ್ಯೆಗಳು: ಮಳೆ ಹಾನಿ ಅಥವಾ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಅಥವಾ ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಬಹುದು.

  • ಉಚಿತ ಸಹಾಯವಾಣಿ ಸಂಖ್ಯೆ (Toll-Free): 1077
  • ದೂರವಾಣಿ ಸಂಖ್ಯೆ: 0820-2574802

You cannot copy content of this page

Exit mobile version