Saturday, July 26, 2025

ಸತ್ಯ | ನ್ಯಾಯ |ಧರ್ಮ

ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ- ಉಡುಪಿ ಹೊಸ ಎಸ್‌ಪಿ ಡಾ.ಅರುಣ್

ಉಡುಪಿ: ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ| ಡಾ ಅರುಣ್ ಅವರು ಸೆಪ್ಟೆಂಬರ್ 7ರ ಗುರುವಾರದಂದು ನಿರ್ಗಮಿತ ಎಸ್ಪಿ ಅಕ್ಷಯ್ ಎಚ್ ಅವರಿಂದ ಅಧಿಕಾರ ವಹಿಸಿಕೊಂಡರು.

ನಿರ್ಗಮಿತ ಎಸ್ಪಿ ಅಕ್ಷಯ್ ಹೆಚ್ ಲಾಠಿ ವಿನಿಮಯ ಮಾಡಿಕೊಳ್ಳುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಅರುಣ್, ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡದೆ ನೈತಿಕ ಪೊಲೀಸ್‌ಗಿರಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿಯಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂದರು.

ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್ಪಿ ದಿನಕರ್ ಮತ್ತಿತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page